ಮಳವಳ್ಳಿ: ತಾಲ್ಲೂಕಿನ ಕಿರುಗಾವಲು ಹೋಬಳಿಯ ಅವ್ವೇರಹಳ್ಳಿ ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ಹಾವಳಿಗೆ ಆರು ಮೇಕೆಗಳು ಬಲಿಯಾಗಿವೆ.

ಗ್ರಾಮದ ರೈತ ರಾಮು ತಮ್ಮ ಮನೆಯ ಕೊಟ್ಟಿಗೆಯಲ್ಲಿ ಮೇಕೆಗಳನ್ನು ಕಟ್ಟಿದ್ದರು. ಶನಿವಾರ ಬೆಳಗಿನ ಜಾವ 10ಕ್ಕೂ ಹೆಚ್ಚು ಬೀದಿ ನಾಯಿಗಳ ಹಿಂಡು ಕೊಟ್ಟಿಗೆಯಲ್ಲಿದ್ದ ಮೇಕೆಗಳ ಮೇಲೆ ದಾಳಿ ಮಾಡಿ ನಾಲ್ಕು ಮೇಕೆಗಳನ್ನು ತಿಂದು ಹಾಕಿ ಎರಡು ಮೇಕೆಗಳನ್ನು ಹೊತ್ತೊಯ್ದಿವೆ. ಬೀದಿ ನಾಯಿಗಳ ದಾಳಿ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೀವನ ನಿರ್ವಹಣೆಗಾಗಿ ಮೇಕೆಗಳ ಸಾಕಾಣಿಕೆಯಿಂದ ಬದುಕು ಕಟ್ಟಿಕೊಂಡಿದ್ದ ರೈತ ರಾಮು ಅವರು ಬೀದಿ ನಾಯಿಗಳ ದಾಳಿಯಿಂದ ಕಂಗಾಲಾಗಿದ್ದಾರೆ. ಮನೆಯ ಜವಾಬ್ದಾರಿಗಾಗಿ ಇದ್ದ ಮೇಕೆಗಳನ್ನು ಬೀದಿ ನಾಯಿಗಳು ಬಲಿ ಪಡೆದಿದ್ದು, ಇದ್ದರಿಂದ ಸುಮಾರು ₹90 ಸಾವಿರ ನಷ್ಟವಾಗಿದ್ದು, ಕೂಡಲೇ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕು ಎಂದು ರೈತ ರಾಮು ಆಗ್ರಹಿಸಿದರು.

ಘಟನಾ ಸ್ಥಳಕ್ಕೆ ಪಶುಪಾಲನಾ ಇಲಾಖೆಯ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಗಿಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಅವ್ವೇರಹಳ್ಳಿಯ ಸುತ್ತಮುತ್ತಲಿನ ಬೀದಿ ನಾಯಿಗಳ ಹಾವಳಿ ವ್ಯಾಪಕವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-491262915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.