ತಿಪಟೂರು: ನಗರದ ಕೆ.ಆರ್.ಬಡಾವಣೆಯ ಮೂರನೇ ಮುಖ್ಯರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ಮಹೇಂದ್ರ( 34) ಎಂಬುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಮಹೇಂದ್ರ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿಯ ಹೊಸಕೆರೆ ಗ್ರಾಮದ ನಿವಾಸಿ. ಮಹೇಂದ್ರರನ್ನು ಅಟ್ಟಿಸಿಕೊಂಡು ಬಂದು ಹಲ್ಲೆ ಮಾಡಿದ್ದು, ರಕ್ತದ ಮಡುವಿನಲ್ಲಿ ರಸ್ತೆಯ ತುಂಬಾ ಓಡಾಡಿರುವ ಗುರುತು ಪತ್ತೆ ಆಗಿದೆ.
ಅರೆ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಬ್ಯಾಗ್, ಮೊಬೈಲ್, ಡಿಎಲ್ ದೊರೆತಿದೆ. ಡಿವೈಎಸ್ ಪಿ ವಿನಾಯಕ ಶೆಟ್ಟಿಗೇರಿ, ತಿಪಟೂರು ಗ್ರಾಮಾಂತರ ಠಾಣೆಯ ಇನ್ಸ್‌ಸ್ಪೆಕ್ಟರ್ ಸಿದ್ದರಾಮೇಶ್ವರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.