ಮದ್ದೂರು: ‘ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ, ಆದ್ದರಿಂದ ಗ್ರಾಮೀಣ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ’ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.

ತಾಲ್ಲೂಕಿನ ಕೊಪ್ಪ ಹೋಬಳಿಯ ಮುದಗೆರೆಯಲ್ಲಿ ₹40 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕುಡಿಯುವ ನೀರು, ಚರಂಡಿ, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗಿದ್ದು, ಇದಕ್ಕಾಗಿ ಶಕ್ತಿ ಮೀರಿ ಕ್ಷೇತ್ರಕ್ಕಾಗಿ ಸರ್ಕಾರದಿಂದ ಅನುದಾನಗಳನ್ನು ತರುತ್ತಿದ್ದೇನೆ’ ಎಂದರು.

‘ಮುದಗೆರೆ ಗ್ರಾಮದಲ್ಲಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಮಾಡುವುದು ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿತ್ತು. ಆದ್ದರಿಂದ ಸುಸಜ್ಜಿತ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ, ಶೀಘ್ರ ಕಾಮಗಾರಿ ಮುಗಿದು ಗ್ರಾಮಸ್ಥರಿಗೆ ಅನುಕೂಲವಾಗಲಿದೆ’ ಎಂದರು.

‘ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮುಂದಾಗಿದ್ದು, ಹಂತಹಂತವಾಗಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಜಯ್, ಚಂದ್ರು, ಕೃಷ್ಣ, ಮಾರಸಿಂಗನಹಳ್ಳಿ ರಾಮಚಂದ್ರು,ರಾಮೇಗೌಡ, ಶಿವರಾಮಣ್ಣ, ಕಿರಣ್, ಸಿದ್ದೇಗೌಡ,ಮಹದೇವು, ಕುಮಾರ್, ನವೀನ್, ಆನೆದೊಡ್ಡಿ ರಾಮಣ್ಣ,ಗೋವಿಂದ, ನೀರಾವರಿ ಇಲಾಖೆಯ ಎಇಇ ನಾಗರಾಜು, ಕೆಆರ್ಡಿಎಲ್ನ ಎಂಜಿನಿಯರ್ ರಾಕೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-164072428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.