ಮಂಡ್ಯ: ನಗರದ ಮೈಷುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.

ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರೊಂದಿಗೆ ಈಚೆಗೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು, ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಜೂನ್ ಎರಡನೇ ವಾರದ ನಂತರ ಕಾರ್ಖಾನೆ ಪ್ರಾರಂಭಿಸಲು ಆಗ್ರಹಿಸಲಾಯಿತು . ರೈತರಿಗೆ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹50 ಮತ್ತು ಕಾರ್ಖಾನೆ ₹50 ಪ್ರೋತ್ಸಾಹಧನ ಸೇರಿ ಒಟ್ಟು ₹100 ರೈತರ ಖಾತೆಗೆ ಸಂದಾಯ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ಜೂನ್ 10ರವರೆಗೆ ರೈತರಿಗೆ ತಲುಪಿಸುತ್ತೇವೆ ಎಂದು ಅಧ್ಯಕ್ಷರು ಭರವಸೆ ನೀಡಿದರು.

ಕಾರ್ಖಾನೆಯ ಕಬ್ಬು ಅರೆಯುವುದು, ಕಬ್ಬು ಒಪ್ಪಿಗೆ ಮಾಡಿಸಿವುದು, ಕಬ್ಬು ಕಟಾವಿಗೆ ಕಾರ್ಮಿಕರನ್ನು ಕರೆ ತರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಕಾರ್ಖಾನೆಯಲ್ಲಿ ಬಳಕೆ ಆಗದ ವಸ್ತು ವಿಲೇವಾರಿಗಳ ಬಗ್ಗೆಯೂ ಮಾತುಕತೆ ನಡೆಯಿತು.

ಸಭೆಯಲ್ಲಿ ರೈತ ನಾಯಕಿ ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಕೆ.ಬೋರಯ್ಯ, ಕನ್ನಡ ಸೇನೆ ಮುಖಂಡ ಮಂಜುನಾಥ್. ಎಂ.ಬಿ. ನಾಗಣ್ಣಗೌಡ, ಒಪ್ಪಿಗೆದಾರರ ಸಂಘದ ಕೃಷ್ಣ, ಡಿಎಸ್ಎಸ್ ಎಂ.ವಿ. ಕೃಷ್ಣ, ಶಿವಳ್ಳಿ ಚಂದ್ರಶೇಖರ್, ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-901130624

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.