ನಾಗಮಂಗಲ: ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಹೆರಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಅಳಿಸಂದ್ರ ಗ್ರಾಮದ ಸತ್ಯಪ್ರಕಾಶ್ (17) ಮತ್ತು ಬಿಂಡಿಗನವಿಲೆ ಹೋಬಳಿಯ ಹೆರಗನಹಳ್ಳಿ ಗ್ರಾಮದ ಯಶಸ್(17) ಮೃತಪಟ್ಟವರು. ಈ ಇಬ್ಬರು ಬಾಲಕರು ಸ್ನೇಹಿತರಾಗಿದ್ದು, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪಡೆಯುವ ತಯಾರಿಯಲ್ಲಿದ್ದರು.

ಶಾಲಾ-ಕಾಲೇಜುಗಳಿಗೆ ರಜೆ ಇರುವ ಕಾರಣ, ಈ ಇಬ್ಬರು ಶನಿವಾರ ಸಂಜೆ 5 ಗಂಟೆಯಲ್ಲಿ ಹೆರಗನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದರು. ಬಾಲಕರು ಮನೆಗೆ ಬಾರದಿರುವುದರಿಂದ ಗಾಬರಿಗೊಂಡ ಪೋಷಕರು, ಸ್ನೇಹಿತರು ಹಾಗೂ ಕುಟುಂಬಸ್ಥರ ಮನೆಗಳಲ್ಲಿ ವಿಚಾರಿಸಿದಾಗ, ಈಜಾಡಲು ಕೆರೆಗೆ ತೆರಳಿರುವ ವಿಚಾರ ಗೊತ್ತಾಗಿದೆ. ಕೆರೆಯ ಬಳಿ ಬಂದು ಶನಿವಾರ ರಾತ್ರಿ ನೋಡಲಾಗಿ, ಕೆರೆಯ ಕೋಡಿಯ ಬಳಿ ಸತ್ಯಪ್ರಕಾಶ್ ನಿಲ್ಲಿಸಿದ್ದ ಬೈಕ್ ಹಾಗೂ ಬಾಲಕರ ಬಟ್ಟೆಗಳು ಪತ್ತೆಯಾಗಿದ್ದವು.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭಾನುವಾರ ಶೋಧ ನಡೆಸಿ, ಕೆರೆಯಿಂದ ಶವಗಳನ್ನು ಹೊರತೆಗೆದರು. ಬಿ.ಜಿ. ನಗರದ ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-40-1987292460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.