ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಯುಳ್ಳ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಲೋಕಾರ್ಪಣೆಗೊಳಿಸಲಿದ್ದಾರೆ.

ಬೆಳಿಗ್ಗೆ ಮಂಟಪದ ಉದ್ಘಾಟನೆಯ ನಂತರ ಬಿಜಿಎಸ್ ಸ್ಟೇಡಿಯಂನಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದು, ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಚಿವ ಎನ್.ಚಲುವರಾಯಸ್ವಾಮಿ, ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸುವರು.

ಗುರು ಭೈರವೈಕ್ಯ ಮಂದಿರದ ಕುಂಭಾಭಿಷೇಕ ಮಹೋತ್ಸವದ ಅಂಗವಾಗಿ 3 ದಿನ ಜರುಗುವ ಧಾರ್ಮಿಕ ಪೂಜಾ ಕೈಂಕರ್ಯಕ್ಕೆ ಶನಿವಾರ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. 12 ರಂದು ಕುಂಭಾಭಿಷೇಕ, 13 ಮತ್ತು 14ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-1697486650

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.