ಮಂಡ್ಯ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಬುಧವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ‘ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲಿ ನೀಟ್ ಪರೀಕ್ಷೆ ನಡೆದಿದೆ. ಸಾಕಷ್ಟು ಭದ್ರತೆಯಿಂದ ನೀಟ್ ಪರೀಕ್ಷೆ ನಡೆದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಅದನ್ನು ಗಮನಿಸಿದರೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ಎಷ್ಟು ಬುದ್ಧಿವಂತರಿರಬಹುದು. ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ’ ಎಂದರು.

‘ಚಿನ್ನ ಖರೀದಿ ಮಾಡದಿರಿ’ ಎಂದು ಪ್ರಧಾನಿ ಮೋದಿ ಹೇಳಿಕೆಗೆ, ‘ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಈ ರೀತಿ ಕರೆ ನೀಡಿದ್ದಾರೆ ಅನ್ನುವ ಮಾಹಿತಿ ಇದೆ. ಇದು ಎಷ್ಟರ ಮಟ್ಟಿಗೆ ಸರಿ ತಪ್ಪು ಗೊತ್ತಿಲ್ಲ. ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಎಲ್ಲವನ್ನೂ ಜನರ ಮೇಲೆ ಹಾಕುವುದು ಸರಿಯಲ್ಲ’ ಎಂದರು.

ಕುಡಿಯುವ ನೀರಿಗೆ ತೊಂದರೆ ಹಿನ್ನೆಲೆಯಲ್ಲಿ ಕೆರೆಕಟ್ಟೆಗೆ ನೀರು ಬಿಡುಗಡೆಗೆ ಕ್ರಮ ವಹಿಸಲಾಗಿದೆ. ಸದ್ಯಕ್ಕೆ ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡೋದಿಲ್ಲ. ಅವರನ್ನು ಫ್ರೀಯಾಗಿ ಬಿಟ್ಟುಬಿಡೋಣ. ಯಾವ ಕಾರ್ಖಾನೆ ತರುತ್ತಾರೆ? ಯಾವ ಊರಿಗೆ ಹಾಕುತ್ತಾರೆ? ನೋಡೋಣ. ಕುಮಾರಸ್ವಾಮಿ ಅವರಾದರೂ ಕೈಗಾರಿಕೆ ತರಲಿ, ಶಾಸಕ ರವಿಕುಮಾರ್ ಅವರಾದರೂ ಮಾಡಲಿ. ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-40-1215535089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.