ಮದ್ದೂರು: ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮೂರು ದಿನಗಳಿಂದ ಕುಡಿಯುವ ನೀರಿಗೆ ಅಭಾವವಾಗಿರುವ ಕಾರಣ ಕೊಳವೆಬಾವಿ ಸರಿಪಡಿಸಲು ಸಿಬ್ಬಂದಿಯೊಂದಿಗೆ ಹೋದ ನಗರಸಭೆಯ ಅಧಿಕಾರಿಗಳನ್ನು ರಿಪೇರಿ ಮಾಡದಂತೆ ತಡೆದು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಮಾತನಾಡಿ, ‘ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ಮೂರು ದಿನಗಳಿಂದ ವ್ಯತ್ಯಯ ಉಂಟಾಗಿದೆ. ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸುಮಾರು 120 ದಿನಗಳಿಂದ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿಕೊಂಡು ಬರುತ್ತಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಂದು ನಮ್ಮ ಸಮಸ್ಯೆಯನ್ನು ಆಲಿಸಿಲ್ಲ. ಹೀಗಾಗಿ ನಗರಸಭೆಯ ಸಿಬ್ಬಂದಿ ಬೋರ್ವೆಲ್ ದುರಸ್ತಿ ಮಾಡುವುದಕ್ಕೆ ನಮ್ಮ ವಿರೋಧವಿದೆ’ ಎಂದರು.

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ನಗರಸಭಾ ಪೌರಾಯುಕ್ತೆ ರಾಧಿಕಾ, ನಗರಸಭಾ ಸಿಬ್ಬಂದಿ ಬಂದರು. ‘ದುರಸ್ತಿ ಮಾಡಲು ಅವಕಾಶ ನೀಡಿ. ಇಲ್ಲದಿದ್ದರೆ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಲಿದೆ’ ಎಂದು ಅಧಿಕಾರಿಗಳು ಮನವಿ ಮಾಡಿದರು.

ನಗರಸಭೆ ಹೊರತುಪಡಿಸಿ ಪರ್ಯಾಯವಾಗಿ ತಾಲ್ಲೂಕು ಅಥವಾ ಜಿಲ್ಲಾಡಳಿತ ವತಿಯಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಪ್ರತಿಭಟನಾಕಾರು ಪಟ್ಟು ಹಿಡಿದರು. ಗೊಂದಲ ವಾತಾವರಣ ತಡರಾತ್ರಿವರೆಗೂ ಮುಂದುವರಿಯಿತು. ಅಧಿಕಾರಿಗಳು ವಾಪಸ್ ಹೋದರು.

ಈ ವೇಳೆ ತಾ.ಪಂ. ಮಾಜಿ ಸದಸ್ಯ ಜಿ.ಪಿ. ಯೋಗೇಶ್ ಮುಖಂಡರಾದ ಜಿ.ಎ. ಶಂಕರ್, ಮೋಹನ್, ಚಂದ್ರಶೇಖರ್, ವೀರೇಶ್, ನಾಗಣ್ಣ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-40-287432054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.