ನಾಗಮಂಗಲ: ಬೆಂಗಳೂರು– ಹಾಸನ ಹಾಗೂ ಆದಿಚುಂಚನಗಿರಿ–ಮೈಸೂರು ಕಡೆಗೆ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕಾಗಿ ಬೆಂಗಳೂರು, ದೆಹಲಿ, ಮುಂಬೈನಂತಹ ದೊಡ್ಡ ನಗರ ಪ್ರದೇಶಗಳಲ್ಲಿರುವಂತೆ ತಾಲ್ಲೂಕಿನ ನೆಲ್ಲಿಗೆರೆ ಕ್ರಾಸ್ ಅನ್ನು ₹150 ಕೋಟಿಗೂ ಅಧಿಕ ವೆಚ್ಚದಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ಅಭಿವೃದ್ಧಿಪಡಿಸಲು ರೂಪರೇಷೆ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬೆಳ್ಳೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಳಚರಂಡಿ ನೀರನ್ನು ಶುದ್ಧೀಕರಿಸಲು ತಾವರೆಕೆರೆ ಬಳಿ ₹4.5 ಕೋಟಿ ವೆಚ್ಚದಲ್ಲಿ ಕ್ಯಾಮಸ್ ತಂತ್ರಜ್ಞಾನ ಆಧರಿತ 2.46 ಎಂಎಲ್ಡಿ ಸಾಮರ್ಥ್ಯದ ಒಳಚರಂಡಿ ಸಂಸ್ಕರಣಾ ಘಟಕ, ಬೆಳ್ಳೂರಿನಲ್ಲಿ ₹ 3.25 ಕೋಟಿ ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ನಿವೃತ್ತ ಸರ್ಕಾರಿ ನೌಕರರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಬೆಳ್ಳೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ನಾಗಲಾಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡವನ್ನು ಇದೇ ವೇಳೆ ಸಚಿವರು ಉದ್ಘಾಟಿಸಿದರು.

ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೆಆರ್ಐಡಿಎಲ್ನ ಇಇ ಸೋಮಶೇಖರ್, ಎಇಇ ಚೈತ್ರ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಕನ್ನಾಘಟ್ಟ ವೆಂಕಟೇಶ್, ಕೆ.ವಿ.ದಿನೇಶ್, ರಂಗೇಗೌಡ, ಪಾಪಣ್ಣ, ಶಿವಣ್ಣ, ಯಾಸೀನ್, ಯಶೋಧಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-1201305572

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.