ಶ್ರೀರಂಗಪಟ್ಟಣ ದಸರಾ ಲಾಂಛನ ಬಿಡುಗಡೆ

7

ಶ್ರೀರಂಗಪಟ್ಟಣ ದಸರಾ ಲಾಂಛನ ಬಿಡುಗಡೆ

Published:
Updated:
Deccan Herald

ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವ–2018ರ ಲಾಂಛನವನ್ನು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಶುಕ್ರವಾರ ಬಿಡುಗಡೆ ಮಾಡಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ಅವರು ‘ಈ ಬಾರಿಯ ದಸರಾವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚು ಒತ್ತು ನೀಡಲಾಗುವುದು. ಎಲ್ಲಾ ಸರ್ಕಾರಿ ಇಲಾಖೆಗಳಿಗೂ ಒಂದೊಂದು ಜವಾಬ್ದಾರಿ ವಹಿಸಲಾಗಿದೆ. ಕೃಷಿ, ಆರೋಗ್ಯ, ಅರಣ್ಯ, ಪ್ರವಾಸೋದ್ಯಮ, ಪೊಲೀಸ್, ಮಕ್ಕಳ ಹಾಗೂ ಮಹಿಳಾ ಅಭಿವೃದ್ಧಿ, ಪುರಸಭೆ, ರೇಷ್ಮೆ ಇಲಾಖೆ, ಮಾಹಿತಿ ಪ್ರಸಾರ ಹಾಗೂ ವಾರ್ತಾ ಇಲಾಖೆ ವತಿಯಿಂದ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಾಗುವುದು’ ಎಂದರು.

‘ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ದಸರಾ ಪ್ರಯುಕ್ತವಾಗಿ ಕುಸ್ತಿ, ಟ್ರಕ್ಕಿಂಗ್, ಸೈಕ್ಲಿಂಗ್ ಹಾಗೂ ಹಾಲು ಕರೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪುಸ್ತಕ ಮಳಿಗೆ ತೆರೆಯಲಿದ್ದು, ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸುತ್ತಿವೆ. ಆರೋಗ್ಯ ಇಲಾಖೆ ಚಿಕಿತ್ಸಾ ಕೇಂದ್ರ ತೆರೆಯಲಿದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್‌, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಬಿ.ವಿಜಯ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೃಷ್ಣಂರಾಜು, ಶ್ರೀರಂಗಪಟ್ಟಣ ತಹಶೀಲ್ದಾರ್‌ ನಾಗೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !