ಮಂಡ್ಯ: ತಾಲ್ಲೂಕಿನ ಪಣಕನಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಕಾರು ಪಲ್ಟಿಯಾಗಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಚ್ಚೀಗೆರೆ ಗ್ರಾಮದ ನಿವಾಸಿ ಕಿರಣ್ (35) ಅವರ ಪುತ್ರ ಕಿಶೋರ್ (13) ಮೃತರು. ಪುತ್ರಿ ಕೀರ್ತನಾ(10) ಅವರು ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿ ಪಾಂಡವಪುರಕ್ಕೆ ತೆರಳಿದ್ದ ಮೂವರು, ಕಚ್ಚೀಗೆರೆ ಗ್ರಾಮಕ್ಕೆ ವಾಪಾಸ್ ಹೋಗುವ ವೇಳೆ ಈ ಘಟನೆ ಸಂಭವಿಸಿದೆ.

ಪಣಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೈಸೂರು ಮಾರ್ಗದ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ.

ಪಿಎಸ್ಐ ಸುನಿಲ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.