ಮಂಡ್ಯ: ಇಲ್ಲಿಯ ಮಂಡ್ಯ ತಾಲ್ಲೂಕು ಪಂಚಾಯಿತಿ, ಬೇವಿನಹಳ್ಳಿ ಮತ್ತು ಬೇಲೂರು ಗ್ರಾಮ ಪಂಚಾಯಿತಿ ಕಚೇರಿಗಳು ಮತ್ತು ಇಒ, ಪಿಡಿಒಗಳ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು 3 ಪ್ರತ್ಯೇಕ ತಂಡಗಳಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.

ಮೇ 21 ಮತ್ತು 22ರಂದು ಮಂಡ್ಯ ನಗರದಲ್ಲಿ ಏರ್ಪಡಿಸಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ಬಿ. ವೀರಪ್ಪ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಬೇವಿನಹಳ್ಳಿ ಮತ್ತು ಬೇಲೂರು ಗ್ರಾ.ಪಂ. ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದರು. ಈ ವೇಳೆ ಪೂರಕ ದಾಖಲೆ ಮತ್ತು ಮಾಹಿತಿಯನ್ನು ನೀಡದ ಗ್ರಾ.ಪಂ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಬಗ್ಗೆ ವರದಿ ನೀಡುವಂತೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಮಂಡ್ಯ ಲೋಕಾಯುಕ್ತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಅದರಂತೆ ಲೋಕಾಯುಕ್ತ ಡಿವೈಎಸ್ಪಿ ಸುನಿಲ್ಕುಮಾರ್ ಅವರು ಮಂಡ್ಯ ತಾ.ಪಂ. ಕಚೇರಿ ಮತ್ತು ಇಒ ಲೋಕೇಶ್ಮೂರ್ತಿ ಅವರ ಕಲ್ಲಹಳ್ಳಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಅವರು ಬೇವಿನಹಳ್ಳಿ ಗ್ರಾ.ಪಂ. ಕಚೇರಿ ಮತ್ತು ಪಿಡಿಒ ಚಾಮರಾಜು ಅವರ ಕುವೆಂಪುನಗರದಲ್ಲಿನ ಮನೆಗೆ ಹಾಗೂ ಲೋಕಾಯುಕ್ತ ಇನ್ಸ್ಪೆಕ್ಟರ್ ಲೇಪಾಕ್ಷಮೂರ್ತಿ ಅವರು ಬೇಲೂರು ಗ್ರಾ.ಪಂ. ಕಚೇರಿ, ಪಿಡಿಒ ಸಿದ್ದರಾಜು ಅವರ ನಿವಾಸಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿದರು. ಪ್ರಮುಖವಾಗಿ ನಿವೇಶನಗಳ 9 ಮತ್ತು 11ಎ ನಮೂನೆಗಳು, 15ನೇ ಹಣಕಾಸು ಯೋಜನೆಯಡಿ ನಿರ್ವಹಿಸಿರುವ ಕಾಮಗಾರಿಗಳು ಮತ್ತು ಅವುಗಳಿಗೆ ಆಗಿರುವ ವೆಚ್ಚ ವಿವರಗಳು, ತೆರಿಗೆ ಸಂಗ್ರಹ ಮಾಹಿತಿ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅನುಮೋದನೆ ಇಲ್ಲದೆ ಅಕ್ರಮವಾಗಿ ರಚಿಸಿರುವ ನಿವೇಶನಗಳು, ನಾನಾ ಕಾಮಗಾರಿಗಳು ಮತ್ತು ಕಾಮಗಾರಿಗಳ ಡೂಪ್ಲಿಕೇಷನ್ ಮತ್ತಿತರ ಸಂಗತಿಗಳ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕ್ರೊಡೀಕರಿಸಿದರು. ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿ ಕಲೆ ಹಾಕಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-1620920473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.