ಪಾಂಡವಪುರ: ತಾಲ್ಲೂಕಿನ ಚಿನಕುರಳಿ ಸಮೀಪದ ಕೆ.ಮಲ್ಲೇನಹಳ್ಳಿ ಗೇಟ್ ಬಳಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ವಕೀಲ ಹಾಗೂ ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಕಣಿವೆ ಯೋಗೇಶ್ (50) ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

ಪಾಂಡವಪುರ–ಕೆ.ಆರ್.ಪೇಟೆ ಮುಖ್ಯರಸ್ತೆಯಲ್ಲಿ ಚಿನಕುರಳಿ ಕಡೆಯಿಂದ ಪಾಂಡವಪುರ ಕಡೆಗೆ ಕಣಿವೆ ಯೋಗೇಶ್ ಬರುತ್ತಿದ್ದ ವೇಳೆ ಮೈಸೂರು ಕಡೆಯಿಂದ ಸಾರಿಗೆ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಮದ ಯೋಗೇಶ್ ಸ್ಥಳದಲ್ಲಿಯೇ ಮೃತಪಟ್ಟರು.

ಅಪಘಾತ ನಡೆದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಸಾರಿಗೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಡಿಪೊ ಮ್ಯಾನೇಜರ್ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ಬಳಿಕ ಸಾರಿಗೆ ಅಧಿಕಾರಿ ಸ್ಥಳಕ್ಕೆ ಬಂದು ಮೃತ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ ಬಳಿಕ ಮೃತ ದೇಹವನ್ನು ಪಾಂಡವಪುರ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸ ಲಾಯಿತು.

ಅವರಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಗೀತಾ ಹಾಗೂ ಪುತ್ರ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-685785646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.