ಪಾಂಡವಪುರ: ರೈತರು ಬೆಳೆದ ಸಾವಯವ ಬೆಳೆಗಳಿಗೆ ಮಧ್ಯವರ್ತಿಗಳ ಹಾವಳಿ ಇಲ್ಲದೇ ಗ್ರಾಹಕರಿಗೆ ವಿಷರಹಿತ ಆಹಾರ ಮತ್ತು ರೈತರಿಗೆ ಉತ್ತಮ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಜೂನ್1ರಂದು ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಧ್ಯಾಹ್ನ 3.30ರಿಂದ ಸಂಜೆ 6.30ರವರೆಗೆ ಸಾವಯವ ಸಂತೆ ಆಯೋಜಿಸಲಾಗಿದೆ ಎಂದು ರೈತ ಸ್ವರಾಜ್ಯ ವೇದಿಕೆಯ ಕವಿತಾ ಕುರಗಂಟಿ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಂಡವಪುರ ತಾಲ್ಲೂಕಿನಲ್ಲಿ ಸಾವಯವ ಬೇಸಾಯ ಪದ್ದತಿಗೆ ಪರಿವರ್ತಿಸಲು ರಾಜ್ಯ ಸರ್ಕಾರದ ಬಜೆಟ್ನಲ್ಲಿ ಘೋಷಿಸಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸಾವಯವ ಸಂತೆ ಆಯೋಜಿಸಲಾಗಿದೆ ಎಂದರು.

ಸಾವಯವ ಕೃಷಿಕರು ಸಂಘಟಿತರಾಗಿ15 ದಿನಗಳಿಗೊಮ್ಮೆ ಸಾವಯವ ಸಂತೆ ಆಯೋಜಿಸುತ್ತಿದ್ದಾರೆ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ವೈ.ಪಿ.ಮಂಜುನಾಥ್, ಹಿರಿಯ ಮುಖಂಡರಾದ ಕೆ.ಟಿ.ಗೋವಿಂದೇಗೌಡ, ಕೆನ್ನಾಳು ನಾಗರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-488421048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.