ಪಾಂಡವಪುರ: ಈ ಬಾರಿಯ ಬಜೆಟ್ನಲ್ಲಿ ರಾಜ್ಯ ಸರ್ಕಾರವು ಪಾಂಡವಪುರ ತಾಲ್ಲೂಕನ್ನು ಸಾವಯವ ಕೃಷಿಯನ್ನಾಗಿ ಪರಿವರ್ತನೆ ಮಾಡಲು ಘೋಷಣೆ ಮಾಡಿದ್ದು, ಇದರ ಅನುಷ್ಠಾನಕ್ಕೆ ಪ್ರಥಮ ಹಂತದಲ್ಲಿ ಪ್ರಾಯೋಗಿಕವಾಗಿ ಮೇಲುಕೋಟೆ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಜಿಲ್ಲಾಧಿಕಾರಿ ಕುಮಾರ ಅವರೊಂದಿಗೆ ತಾಲ್ಲೂಕಿನ ಸಮಸ್ಯೆಗಳ ಸಂಬಂಧ ಚರ್ಚೆ ಮಾಡಿದ ಸಂದರ್ಭದಲ್ಲಿ ಮೇಲುಕೋಟೆ ಹೋಬಳಿಯನ್ನು ಸಾವಯವ ಕೃಷಿಯನ್ನಾಗಿ ಪರಿವರ್ತನೆ ಮಾಡುವ ಮೊದಲ ಹಂತದ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ನಿರ್ಧರಿಸಲಾಯಿತು.

ಶಾಸಕ ದರ್ಶನ್ ಮಾತನಾಡಿ, ರಾಜ್ಯ ಸರ್ಕಾರವು 2026–27ನೇ ಸಾಲಿನ ಬಜೆಟ್ನಲ್ಲಿ ಪಾಂಡವಪುರ ತಾಲ್ಲೂಕನ್ನು ‘ಸಾವಯವ ಕೃಷಿ ತಾಲ್ಲೂಕು’ ಎಂದು ಘೋಷಿಸಿರುವುದು ಕೃಷಿ ಕ್ಷೇತ್ರದ ದೀರ್ಘಕಾಲಿನ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ಈ ಘೋಷಣೆಯಿಂದ ರೈತರ ಆದಾಯ ವೃದ್ಧಿ, ಮಣ್ಣಿನ ಆರೋಗ್ಯ ಸಂರಕ್ಷಣೆ, ಪರಿಸರ ಸಮತೋಲನ ಹಾಗೂ ವಿಷ ರಹಿತ ಆಹಾರ ಉತ್ಪಾದನೆಗೆ ಉತ್ತೇಜನ ದೊರೆಯಲಿದೆ. ಈ ನಿಟ್ಟಿನಲ್ಲಿ ಪಾಂಡವಪುರ ತಾಲ್ಲೂಕನ್ನು ಮಾದರಿ ಸಾವಯವ ಕೃಷಿ ಪ್ರದೇಶವನ್ನಾಗಿ ರೂಪಿಸುವ ಮೂಲಕ ರಾಜ್ಯ ಇತರೆ ಭಾಗಗಳಿಗೆ ಪ್ರೇರಣೆಯಾಗುವಂತೆ ಸಮಗ್ರ ಯೋಜನೆ ಜಾರಿಗೊಳಿಸುವುದು ನಮ್ಮ ಆಶಯ ಎಂದರು.

ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಕ್ರಮ: ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ತಾಲ್ಲೂಕಿನ ಕನಗನಹಳ್ಳಿ ಗ್ರಾಮದ ಬಳಿ 14 ಎಕರೆ ಸರ್ಕಾರಿ ಜಾಗದಲ್ಲಿ ಸೋಲಾರ್ ಪ್ಲಾಂಟ್ ನಿರ್ಮಿಸುವ ಸಂಬಂಧ ಬೇಕು ಬೇಡ ಎಂಬ ಕೂಗು ಎದ್ದಿತ್ತು. ಈ ಬಗ್ಗೆ ಇಂದು ಸ್ಥಳ ಪರಿಶೀಲನೆ ನಡೆಸಲಾಗಿದೆ. ಅದು ಸರ್ಕಾರಿ ಜಾಗವಾಗಿದೆ. ಇಲ್ಲಿ ಸೋಲಾರ್ ಪ್ಲಾಂಟ್ ನಿರ್ಮಿಸಿದರೆ ಸುಮಾರು 7 ಮೆಗಾ ವಾಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ. ಇದರಿಂದ ಕೃಷಿಗೆ ತುಂಬಾ ಅನುಕೂಲವಾಗಲಿದೆ. ಜತೆಗೆ ತಾಲ್ಲೂಕಿನ ಎಂ.ಶೆಟ್ಟಹಳ್ಳಿ ಬಳಿ ಇರುವ ಸರ್ಕಾರಿ ಜಾಗದಲ್ಲಿ ಮತ್ತೊಂದು ಸೋಲಾರ್ ಪ್ಲಾಂಟ್ ಘಟಕ ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದರು.

ರಂಗಮಂದಿರ ನಿರ್ಮಾಣಕ್ಕೆ ಕ್ರಮ: ಪಟ್ಟಣದ ಜನರ ಬಹುದಿನಗಳ ಕನಸಾದ ರಂಗಮಂದಿರ ನಿರ್ಮಾಣಕ್ಕೆ ಸರ್ಕಾರವು ಅನುದಾನ ನೀಡಲು ಒಪ್ಪಿದೆ. ಆದರೆ, ಜಾಗದ ಸಮಸ್ಯೆ ಇತ್ತು. ಈಗ ಪಟ್ಟಣದ ಸ.ನಂ.13ರಲ್ಲಿ ಜಾಗ ಗುರುತಿಸಲಾಗಿದೆ. ಜಿಲ್ಲಾಧಿಕಾರಿ ಇದಕ್ಕೆ ಅನುಮತಿ ನೀಡಿದ್ದಾರೆ. ಈಗ ರಂಗಮಂದಿರ ಮತ್ತು ಮತ್ತೊಂದು ಕ್ರೀಡಾಂಗಣ ನಿರ್ಮಿಸುವ ಹಾದಿ ಸುಗಮವಾಗಿದೆ, ಗ್ರಂಥಾಲಯಕ್ಕೆ ನೂತನ ಕಟ್ಟಡ ನಿರ್ಮಾಣಕ್ಕೆ ಇಷ್ಟರಲ್ಲಿಯೇ ಜಾಗ ಗುರುತಿಸಿ ಕ್ರಮವಹಿಸಲಾಗುವುದು ಎಂದು ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಕೈಗಾರಿಕೆ ಸ್ಥಾಪನೆ: ತಾಲ್ಲೂಕಿನ ಮಾಣಿಕ್ಯನಹಳ್ಳಿ ಬಳಿ 28 ಎಕರೆ ಸರ್ಕಾರಿ ಜಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಜಾಗ ಅವಶ್ ಇತ್ತು. ಇದಕ್ಕೆ ಜಿಲ್ಲಾಧಿಕಾರಿ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾಮನಾಯ್ಕನಹಳ್ಳಿ ಬಳಿ ಕೆಪಿಟಿಸಿಎಲ್ನಿಂದ ವಿದ್ಯುತ್ ಉಪ ಕೇಂದ್ರ ಸ್ಥಾಪನೆಗೆ ಸರ್ಕಾರಿ ಜಾಗ ನೀಡಲು ಜಿಲ್ಲಾಧಿಕಾರಿ ಅನುಮೋದನೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದರು.

ತಾಲ್ಲೂಕಿನ ಕಟ್ಟೇರಿ ಗ್ರಾಮದಲ್ಲಿ ಆಯುಷ್ಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಜಾಗ ಮಂಜೂರಾತಿ, ಹೊನಗಾನಹಳ್ಳಿ ರಸ್ತೆ ಸಮಸ್ಯೆ, ಡಿಂಕಾ ಶೆಟ್ಟಹಳ್ಳಿ ಗೋಮಾಳ ಅಕ್ರಮ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ, ತಾ.ಪಂ.ಇಒ ಎಂ.ಎಸ್.ವೀಣಾ, ಪಿಡಿಒ ಆರತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ವೈ.ಪಿ.ಮಂಜುನಾಥ್, ಕಾರ್ಯದರ್ಶಿ ಆಶೋಕ್, ಮುಖಂಡರಾದ ಎಂಜಿನಿಯರ್ ರೂಪ ಅರಳಕುಪ್ಪೆ, ರಘು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-40-1863376646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.