ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಕೋವಿಡ್‌ ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆ

Last Updated 22 ಮೇ 2020, 13:48 IST
ಅಕ್ಷರ ಗಾತ್ರ

ಮಂಡ್ಯ: ಮುಂಬೈನಿಂದ ಬಂದ 8 ಮಂದಿಯಲ್ಲಿ ಶುಕ್ರವಾರ ಕೋವಿಡ್‌–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದೆ. ಸಕ್ರಿಯ ಪ್ರಕರಣಗಳಲ್ಲಿ ಮೊದಲ ಸ್ಥಾನ ಪದಿದೆ. ಬೆಂಗಳೂರು ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 121 ಇದ್ದರೆ, ಮಂಡ್ಯ ಜಿಲ್ಲೆಯಲ್ಲಿ 184 ಪ್ರಕರಣಗಳಿವೆ.

ಇಲ್ಲಿಯವರೆಗೂ 176 ಮಂದಿ ವಲಸಿಗರಲ್ಲಿ ಸೋಂಕು ಪತ್ತೆಯಾಗಿದೆ. ಇದರಲ್ಲಿ ಬಹುತೇಕ ಮಂದಿ ಕೆ.ಆರ್‌.ಪೇಟೆ ತಾಲ್ಲೂಕಿಗೆ ಸೇರಿದ್ದಾರೆ. ಕಿಕ್ಕೇರಿ ಹೋಬಳಿಯ ಆನೆಗೊಳ ಗ್ರಾಮದ ಜಿಲ್ಲಾ ಗಡಿಯ ಚೆಕ್‌ಪೋಸ್ಟ್‌ನಲ್ಲೇ ವಲಸಿಗರನ್ನು ತಡೆದು ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. 2 ಸಾವಿರಕ್ಕೂ ಹೆಚ್ಚುಮಂದಿಯನ್ನು ಕೆ.ಆರ್‌.ಪೇಟೆಯ ವಿವಿಧ ಸರ್ಕಾರಿ ಕಟ್ಟಡಗಳಲ್ಲಿ ಕ್ವಾರಂಟೈನ್‌ ಮಾಡಲಾಗಿದೆ.

‘ಮುಂಬೈ ವಲಸಿಗರಲ್ಲಿ ಕೋವಿಡ್‌ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿದೆ. ಮಹಾರಾಷ್ಟ್ರ ವಲಸಿಗರನ್ನು ಜಿಲ್ಲೆಗೆ ಬಾರದಂತೆ ತಡೆಯಲು ಮನವಿ ಮಾಡಿದ್ದೇವೆ. ನಾವು ಮೇ 18ರಿಂದ ಸೇವಾ ಸಿಂಧು ಅರ್ಜಿಗಳಿಗೆ ಅನುಮೋದನೆ ನೀಡುತ್ತಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT