ಮಂಡ್ಯ: ‘ಗ್ರಾಮಗಳಲ್ಲಿ ಅಳಿವಿನಂಚಿನಲ್ಲಿರುವ ಸಸ್ಯ ಪ್ರಬೇಧಗಳನ್ನು ಸಂರಕ್ಷಿಸುವುದು ಪ್ರಜ್ಞಾವಂತ ಜನರ ಜವಾಬ್ದಾರಿಯಾಗಿದೆ’ ಎಂದು ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ. ಯೋಗೀಶ್ ತಿಳಿಸಿದರು.

ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ, ಮಹಿಳಾ ಸರ್ಕಾರಿ ಕಾಲೇಜಿನ ರಾಷ್ಟ್ರೀಯ ಯೋಜನೆ ವತಿಯಿಂದ ತಾಲ್ಲೂಕಿನ ಕಲ್ಮಂಟಿದೊಡ್ಡಿ ಗ್ರಾಮದಲ್ಲಿ ನಡೆದ ಸಸ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಸ್ಯ ಪ್ರಭೇದಗಳ ಬಗ್ಗೆ ಅರಿವು ಹೊಂದುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮತೋಲಿತ ಪರಿಸರವನ್ನು ಕಾಯ್ದುಕೊಳ್ಳಲು ಭೂಮಿ ಮೇಲಿನ ಜೀವಿಗಳ ಅಸ್ತಿತ್ವಕ್ಕೆ ವಿಶೇಷ ಆಸಕ್ತಿಯನ್ನು ಯುವಜನರು ಬೆಳೆಸಿಕೊಳ್ಳುವುದು ಅವಶ್ಯಕತೆ ಇದೆ ಎಂದರು.

ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಭೂಮಿಗೆ ಹೆಚ್ಚು ಹಸಿರು ಹೊದಿಸುವ ಕಾರ್ಯಗಳನ್ನು ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಅಂತರರಾಷ್ಟ್ರೀಯ ಜನಪದ ಕಲಾವಿದ ರಾಜು ಸಬ್ಬನಹಳ್ಳಿ ಪ್ರಕೃತಿ ಸಂರಕ್ಷಣಾ ಗೀತೆಗಳನ್ನು ಸಾದರಪಡಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜೇಶ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಪುಷ್ಪಲತಾ ಆನಂದ್, ಮುಖ್ಯಶಿಕ್ಷಕ ದೊಡ್ಡಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.