ಮಂಡ್ಯ: ‘ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್ ಅವರು, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಬಗ್ಗೆ ಮಾತನಾಡುವ ಮುನ್ನ ನೀವು ಮಂಡ್ಯದವರೇ ಅಲ್ಲ ಎಂಬುದನ್ನು ತಿಳಿದುಕೊಳ್ಳಬೇಕು. ಜೊತೆಗೆ ವಂಶವೃಕ್ಷ ಪ್ರದರ್ಶಿಸಿ ಮಾತನಾಡಬೇಕು’ ಎಂದು ಕಾಂಗ್ರೆಸ್ ಮುಖಂಡ ಯೋಗೇಶ್ ಮರಿಲಿಂಗನದೊಡ್ಡಿ ಒತ್ತಾಯಿಸಿದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆಯಲ್ಲಿ ಮೌನ ತಾಳಿರುವ ಎಚ್.ಡಿ. ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆ ನೀಡಿರುವುದು ನಿಜ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಜೆಡಿಎಸ್ನವರು ಸಲ್ಲದ ಆರೋಪದಲ್ಲಿ ತೊಡಗಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಆರೋಪಿಸಿದರು.

ಮಂಡ್ಯದಲ್ಲಿ ಜೆಡಿಎಸ್ ನಾಯಕರೇ ಇಲ್ಲದಂತಾಗಿದ್ದು, ಹೊರ ಜಿಲ್ಲೆಯಿಂದ ಕರೆದುಕೊಂಡು ಬಂದು ನಮ್ಮ ಜಿಲ್ಲೆಯ ನಾಯಕತ್ವ ಪ್ರಶ್ನೆ ಮಾಡುವುದು ಸರಿಯಲ್ಲ ಎಂದರು.

ಮುಖಂಡರಾದ ಮಧುಕುಮಾರ್, ಆನಂದ್, ಅಭಿಷೇಕ್, ಸುನೀಲ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-1666513643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.