ಮಂಡ್ಯ: ‘ರಾಜಕಾರಣದಲ್ಲಿ ಮೂವತ್ತು ವರ್ಷಗಳಿಂದ ನಿಷ್ಕಳಂಕ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ, ನಾಗಮಂಗಲ ಶಾಸಕ ಎನ್. ಚಲುವರಾಯಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಅರ್ಹತೆ ಮಾಜಿ ಶಾಸಕ ಸುರೇಶ್ಗೌಡ ಅವರಿಗಿಲ್ಲ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ. ಗಂಗಾಧರ್ ಹೇಳಿದರು.

‘ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿರುವ ಸುರೇಶ್ಗೌಡ ಅವರು ನಾಲಿಗೆ ಕತ್ತರಿಸುವ ಮಾತನಾಡುವುದು ಅವರಿಗೆ ಮತ್ತು ಅವರ ಪಕ್ಷಕ್ಕೆ ಶೋಭೆ ತರುವುದಿಲ್ಲ. ಸುರೇಶ್ಗೌಡರ ಪ್ರಚೋದನಕಾರಿ ಹೇಳಿಕೆಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಸಹ ಸಮರ್ಥಿಸಿಕೊಳ್ಳುವುದಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಟೀಕಿಸಿದರು.

‘ಚನ್ನಪಟ್ಟಣ ತಾಲ್ಲೂಕಿನಿಂದ ಮಂಡ್ಯ ಜಿಲ್ಲೆಗೆ ವಲಸೆ ಬಂದು ಜಿಲ್ಲೆಯ ನಾಯಕರ ಬಗ್ಗೆ ಜೆಡಿಎಸ್ ವರಿಷ್ಠರಲ್ಲಿ ಇಲ್ಲ ಸಲ್ಲದ ಅಪವಾದಗಳನ್ನು ಹೇಳಿ ಒಬ್ಬರ ಮೇಲೆ ಇನ್ನೊಬ್ಬರನ್ನು ಎತ್ತಿಕಟ್ಟಿ ಬದುಕು ಸಾಗಿಸುವುದನ್ನೇ ಕಾಯಕ ಮಾಡಿಕೊಂಡಿರುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್ ಅವರಿಗೆ ಸೂತಕ ಪದದ ಅರ್ಥ ತಿಳಿದಿಲ್ಲ’ ಎಂದು ಟೀಕಿಸಿದರು.

‘ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿರುವ ಸುರೇಶ್ಗೌಡ ಅವರು ನಾಲಿಗೆ ಕತ್ತರಿಸುವ ಮಾತನಾಡುವುದು ಅವರಿಗೆ ಮತ್ತು ಅವರ ಪಕ್ಷಕ್ಕೆ ಶೋಭೆ ತರುವುದಿಲ್ಲ. ಸುರೇಶ್ಗೌಡರ ಆಕ್ರೋಶದ ಮಾತನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರೂ ಸಹ ಸಮರ್ಥಿಸಿಕೊಳ್ಳುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾಗಮಂಗಲ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ. ರಾಜೇಶ್ ಮಾತನಾಡಿ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ‘ಬಿ’ ಫಾರಂ ದೊರೆಯದೆಂಬ ಆತಂಕದಿಂದ ಸಚಿವ ಚಲುವರಾಯಸ್ವಾಮಿ ಅವರ ನಾಲಿಗೆ ಕತ್ತರಿಸುವ ಬಗ್ಗೆ ಸುರೇಶ್ಗೌಡ ಮಾತನಾಡಿದ್ದಾರೆ. ಎರಡು ಬಾರಿ ಶಾಸಕರಾಗಿ ಆಯ್ಕೆಯಾದರೂ ಅವರ ಭ್ರಷ್ಟಾಚಾರಕ್ಕೆ ಅಂಕುಶವಿಲ್ಲ ಎಂದು ದೂರಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹಾಲಹಳ್ಳಿ ಅಶೋಕ್, ದಿನೇಶ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಶರತ್ ರಾಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-40-1666672079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.