ಮಂಡ್ಯ: ಬೀದರ್ ಜಿಲ್ಲೆಯಲ್ಲಿ ಅಪ್ರಾಪ್ತ ಕ್ರೀಡಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣವನ್ನು ಎಸ್ಐಟಿಗೆ ವಹಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ಎಂ.ವಿ.ಪ್ರತಿಮೆ ಎದುರು ಜಮಾವಣೆಗೊಂಡು ಕಾರ್ಯ ಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಘೋಷಣೆ ಕೂಗಿದರು.

‘ಈ ಕೃತ್ಯ ಎಸಗಿರುವ ವ್ಯಕ್ತಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ದಲಿತರ ಮಾನ, ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಬೇಕು. ಈ ಪ್ರಕರಣವನ್ನು ದಿಕ್ಕು ತಪ್ಪಿಸಲು ಅಲ್ಲಿಯ ಶಾಸಕರೊಬ್ಬರ ತಾಳಕ್ಕೆ ಕುಣಿಯುತ್ತಿರುವ ಬೀದರ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಈ ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಅತ್ಯಾಚಾರ ನಡೆಸಿ ಕೊಲೆ ಮಾಡಿ ರುವ ಲಖಾನ್ ವಿರುದ್ಧ ಪೋಕ್ಸೋ, ಅತ್ಯಾಚಾರ, ಕೊಲೆ, ಅಪಹರಣ, ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ಮುಂತಾದ ಕಾಯ್ದೆಗಳನ್ನು ಪ್ರಕರಣದಲ್ಲಿ ದಾಖಲಿಸಬೇಕು. ಈ ಸಂತ್ರಸ್ತ ಕುಟುಂಬಕ್ಕೆ ಸರ್ಕಾರಿ ಮತ್ತು ಸಮರ್ಪಕ ಹಾಗೂ ಪರಿಹಾರಗಳನ್ನು ರಾಜ್ಯ ಸರ್ಕಾರ ನೀಡಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ, ‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಸೋತಿದೆ. ಈ ಸರ್ಕಾರದ ಕನ್ನಡಿಯಂತೆ ಬೀದರ್ನಲ್ಲಿ ನಡೆದಿರುವ ಈ ಅಮಾನವೀಯ ಘಟನೆಯೇ ಸಾಕ್ಷಿಯಾಗಿದೆ. ಜಿಲ್ಲಾಡಳಿತವು ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿರುವುದು ಅತ್ಯಂತ ಖಂಡನೀಯವಾಗಿದೆ, ಇದನ್ನು ಆತ್ಮಹತ್ಯೆ ಪ್ರಕರಣವೆಂದು ಬಿಂಬಿಸಿ ಆರೋಪಿಪರವಾಗಿ ನಿಂತಿರುವ ಅಧಿಕಾರಿಗಳಿಗೂ ತಕ್ಕ ಶಿಕ್ಷೆಯಾಗಬೇಕು’ ಎಂದು ಆಗ್ರಹ ಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ, ಮುಖಂಡರಾದ ಸಿದ್ದಯ್ಯ, ಸ್ವಾಮಿ, ಜಗದೀಶ್, ರಾಕೇಶ್, ಸುಧಾ, ವಿಮಲಾ, ಚಿಕ್ಕವೀರಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-40-1792529847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.