ಮಂಡ್ಯ: ಫೆ.28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೂ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪರೀಕ್ಷೆ -1 ಅನ್ನು ವ್ಯವಸ್ಥಿತವಾಗಿ ನಡೆಸುವ ಕುರಿತು ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಒಟ್ಟು 580ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

14 ಸಾವಿರ ಪರೀಕ್ಷಾರ್ಥಿಗಳು: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 14,187 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು, 1096 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

27 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಯನ್ನು ತ್ರಿಸದಸ್ಯ ಸಮಿತಿಯಿಂದ ದೂರದ ಪರೀಕ್ಷಾ ಕೇಂದ್ರಗಳಾದ ಕೆ.ಆರ್. ಪೇಟೆ, ನಾಗಮಂಗಲ, ಪಾಂಡವಪುರಕ್ಕೆ ಮುಂಚಿತವಾಗಿ ತಲುಪಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಯನ್ನು ಸಾಗಿಸುವಾಗ ಬಿಗಿ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ವಾಹನಕ್ಕೆ ಜಿಪಿಎಸ್ ಅಳವಡಿಸಿ: ಪ್ರಶ್ನೆ ಪತ್ರಿಕೆ ಸಾಗುವ ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು 10 ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಚಲುವಯ್ಯ, ತಹಶೀಲ್ದಾರ್ಗಳಾದ ವಿಶ್ವನಾಥ, ಆದರ್ಶ್, ಅಶೋಕ್, ಚೇತನಾ ಯಾದವ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್. ನರಸಿಂಹಮೂರ್ತಿ ಉಪಸ್ಥಿತರಿದ್ದರು.

‘ಮೊಬೈಲ್ ಸ್ಮಾರ್ಟ್ ಡಿವೈಸ್ ನಿಷಿದ್ಧ’

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್ ಗಳನ್ನು ಕೊಠಡಿಗೆ ತರಲು ಬೀಡಬೇಡಿ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗ ಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಯಾರಿಗೂ ಅನುಮತಿ ನೀಡಬಾರದು ಎಂದು ಜಿಲ್ಲಾಧಿಕಾರಿ ಕುಮಾರ ಎಚ್ಚರಿಕೆ ನೀಡಿದರು. ಕುಡಿಯುವ ನೀರು ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜೊತೆಗೆ ಮೂಲಸೌಕರ್ಯಗಳನ್ನು ಕಲ್ಪಿಸಿ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮವಹಿಸಿ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.