ಮಂಡ್ಯ: ‘ಏಪ್ರಿಲ್ 30ರಿಂದ ಮೇ 13ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ–2 ಬೆಳ್ಳಿಗೆ 10ರಿಂದ 1 ಗಂಟೆಯವರೆಗೆ ನಡೆಯಲಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವರ್ಷದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು 2,877 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ 7 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಯನ್ನು ಸಾಗಿಸುವಾಗ ಬಿಗಿ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಶ್ನೆಪತ್ರಿಕೆ ಸಾಗುವ 7 ಮಾರ್ಗಗಳಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವ ವಾಹನಗಳಲ್ಲಿ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಿಸಿಟಿವಿ ಕ್ಯಾಮೆರಾ ಕಣ್ಗಾವಲು: ಪರೀಕ್ಷೆಯು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗದಂತೆ ಕ್ರಮ ವಹಿಸಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಚಲುವಯ್ಯ, ಆರ್.ಸಿ.ಎಚ್ ಅಧಿಕಾರಿ ಕೆ.ಪಿ.ಅಶ್ವತ್ಥ್, ನಗರಸಭೆಯ ಪರಿಸರ ಎಂಜಿನಿಯರ್ ರುದ್ರೇಗೌಡ, ಜಿಲ್ಲಾ ಖಜಾನೆಯ ಉಪನಿರ್ದೇಶಕ ವರಲಕ್ಷ್ಮಿ, ಕುಟುಂಬ ಕಲ್ಯಾಣಾಧಿಕಾರಿ ಬೆಟ್ಟಸ್ವಾಮಿ, ವಿವಿಧ ಕಾಲೇಜಿನ ಪ್ರಾಂಶುಪಾಲರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-40-1065174667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.