ಮಂಡ್ಯ: ‘ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವು ಜೂನ್ 28ರಂದು ನಡೆಯಲಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೋಷಕರು ಪೋಲಿಯೊ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಜೂನ್ 28ರಂದು ಜಿಲ್ಲೆಯಾದ್ಯಂತ ಬೂತ್ಗಳಲ್ಲಿ ಲಸಿಕೆ ಹಾಕಲಾಗುವುದು. ಜೂನ್ 29ರಿಂದ ಜುಲೈ 1ರವರೆಗೆ ಲಸಿಕೆ ಹಾಕದ ಮಕ್ಕಳನ್ನು ಪತ್ತೆಹಚ್ಚಲು ಮನೆ– ಮನೆಗೆ ಭೇಟಿ ನೀಡಿ ಲಸಿಕೆ ಹಾಕಬೇಕು ಎಂದು ಸೂಚನೆ ನೀಡಿದರು.

ದೇಶದಲ್ಲಿ 2011ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿದ್ದು ನಂತರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ‘ಪೋಲಿಯೋ ಮುಕ್ತ ದೇಶ’ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನಗಳಲ್ಲಿ ಕೆಲವು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿವೆ ಎಂದರು.

ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು ಅಂದಾಜು 1,13,034 ಮಕ್ಕಳಿಗೆ ಲಸಿಕೆ ಹಾಕಲು ಗುರಿ ನೀಡಲಾಗಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 723 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಜ್ಜುಗೊಳಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಕೆ.ಪಿ.ಅಶ್ವತ್ಥ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಲೋಕೇಶ್, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-40-1603168388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.