ಮದ್ದೂರು: ಬೇಸಿಗೆಯಲ್ಲಿ ರೈತರ ಪಂಪ್ಸೆಟ್ಗಳಿಗೆ ಆದಷ್ಟು ನಿಯಮಿತವಾಗಿ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.

ತಾಲ್ಲೂಕಿನ ಕೆ.ಹೊನ್ನಲಗೆರೆ, ರಾಜೇಗೌಡನದೊಡ್ಡಿ ಗ್ರಾಮಗಳಲ್ಲಿ ಸೋಮವಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಇನ್ನೊಂದು ವರ್ಷದಲ್ಲಿ ತಾಲ್ಲೂಕಿನ ಕೆ.ಹೊನ್ನಲಗೆರೆ, ಕೆ.ಬೆಳ್ಳೂರು ಹಾಗೂ ಕೂಳಗೆರೆ ಭಾಗಗಳಲ್ಲಿ ತಲೆದೋರಿರುವ ವಿದ್ಯುತ್ ಹಾಗೂ ನೀರಾವರಿ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಸಿಗಲಿದೆ ಎಂದರು.

ಕೂಳಗೆರೆ ಗ್ರಾಮದಲ್ಲಿ 66 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಸೋಮನಹಳ್ಳಿ ಬಳಿ 220 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳು ನಿರ್ಮಾಣ ಆಗುತ್ತಿರುವುದರಿಂದ ಸಮಸ್ಯೆ ಬಗೆಹರಿಯಲಿದೆ ಎಂದರು.

ಈ ವೇಳೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಮುಖಂಡರಾದ ಪುಟ್ಟಸ್ವಾಮಿ, ಆರ್.ಸಿ.ಎಸ್. ಶಿವು, ಅಪ್ಪಾಜಿಗೌಡ, ಬಸವ, ದೇವರಾಜು, ಸಿದ್ದರಾಮು, ಪ್ರಜ್ವಲ್, ಪ್ರದೀಪ್, ಶಿವರಾಮು, ಶಿವಮಾದು, ಕಾಡಯ್ಯ, ಕೆಂಪಣ್ಣ, ಅಂಗಡಿ ಕೃಷ್ಣ, ನಾಗೇಶ್, ಕುಮಾರ್, ಸಂತೋಷ್, ನಂಜುಂಡ, ಯತೀಶ್, ಹರೀಶ್, ರವೀಶ್, ಗುತ್ತಿಗೆದಾರ ಮಹೇಂದ್ರ ಸೇರಿದಂತೆ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-40-615383598

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.