ಮಂಡ್ಯ: ‘ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಇಡಲು ಕ್ರಮವಹಿಸುವಂತೆ ಹಾಗೂ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆಗೆ ಅಗತ್ಯ ಕ್ರವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ 2026-27ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಸರಬರಾಜು ಮತ್ತು ವಿತರಣೆ ಕುರಿತು ಸಭೆ ನಡೆಸಿ ಮಾತನಾಡಿದರು.

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸಗೊಬ್ಬರ ಮಳಿಗೆಗಳಲ್ಲಿ ರಸಗೊಬ್ಬರಗಳ ದಾಸ್ತಾನು ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವುದು, ಜಿಲ್ಲೆಯ ಎಲ್ಲ ರಸಗೊಬ್ಬರ ಪರಿವೀಕ್ಷಕರು, ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ರಸಗೊಬ್ಬರ ಮಳಿಗೆಗಳಿಗೆ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಬೇಕು ಹಾಗೂ ಅಭಾವ ಸೃಷ್ಟಿಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.

ರಸಗೊಬ್ಬರ ಪರ್ಯಾಯವಾಗಿ ಹಸಿರೆಲೆ ಗೊಬ್ಬರ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಬೇಕು.

ಬೆಳೆ ವಿಮೆ ಮಾಡಿಸಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಹ ಹಾಗೂ ಆಸಕ್ತ ರೈತರು ನಿಗದಿತ ಅವಧಿಯೊಳಗೆ ಬೆಳೆ ವಿಮೆ ಮಾಡಿಸಲು ಅಗತ್ಯ ಪ್ರಚಾರ ಕೖಗೊಂಡು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಿವಲಿಂಗಯ್ಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆದಾರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-246858169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.