ಮದ್ದೂರು: ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಂತಾಗಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತರು ಕೃಷಿ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದರು.

ನಗರದಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ರೈತರೊಂದಿಗೆ ಸಭೆಯಲ್ಲಿ ಕೃಷಿ ಅಧಿಕಾರಿಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ನಗರದ ರಾಗಿ ಖರೀದಿ ಕೇಂದ್ರಕ್ಕೆ ತುಮಕೂರು, ಕುಣಿಗಲ್ ಸೇರಿ ಬೇರೆ ಕಡೆಗಳಿಂದ ಲೋಡ್ಗಟ್ಟಲೆ ರಾಗಿ ಬರುತ್ತಿದೆ. ದಲ್ಲಾಳಿಗಳು ನೋಂದಣಿ ಮಾಡಿಸಿ ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಖರೀದಿ ಕೇಂದ್ರಕ್ಕೆ ಸಾಗಿಸುತ್ತಿದ್ದಾರೆ. ಇಂತಹ ಅಕ್ರಮ ತಡೆಗಟ್ಟಬೇಕೆಂದು ಸಭೆಯಲ್ಲಿದ್ದ ರೈತ ಮುಖಂಡರು ಆಗ್ರಹಿಸಿದರು.

ಸರ್ಕಾರಿ ಕಚೇರಿಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಕೆಲವು ಅಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಿ, ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಾರ್ವಜನಿಕ ಕೆಲಸಗಳು ಸುಗಮವಾಗಿ ನಡೆಯುವಂತೆ ಮಾಡಬೇಕು. ಇಲಾಖೆಗಳಲ್ಲಿ ಸಿಗುವ ಸವಲತ್ತುಗಳು ಮತ್ತು ಮಾಹಿತಿಗಳನ್ನು ನಿಗದಿತ ಸಮಯಕ್ಕೆ ರೈತರಿಗೆ ತಲುಪುವಂತೆ ಮಾಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು.

ಕೃಷಿ ಇಲಾಖೆಯಿಂದ ಚಂಬೆ ಬೀಜವನ್ನು ರೈತರಿಗೆ ವಿತರಿಸುತ್ತಿಲ್ಲ. ಇತ್ತ ರಸಗೊಬ್ಬರ ಕೊರತೆಯೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ವಿನೋದ್ ಮಾತನಾಡಿ, ನಗರದ ವ್ಯಾಪ್ತಿಯಲ್ಲಿರುವ ರೇಷ್ಮೆ ಮತ್ತು ತೋಟಗಾರಿಕೆ ಜಾಗಗಳನ್ನು ಅಭಿವೃದ್ಧಿಯ ನೆಪವೊಡ್ಡಿ ಬೇರೆ ಇಲಾಖೆಗಳಿಗೆ ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.

ರೈತರ ತರಬೇತಿ ಮತ್ತು ಮಾಹಿತಿ ಕೇಂದ್ರಗಳ ಇಲಾಖೆಯ ವಶದಲ್ಲಿರುವ ರೇಷ್ಮೆ ಮತ್ತು ತೋಟಗಾರಿಕೆ ಜಾಗಗಳನ್ನು ನ್ಯಾಯಾಲಯದ ಸಂಕೀರ್ಣ, ರೈಲು ನಿಲ್ದಾಣ, ನಗರಸಭೆ, ಟ್ರಾಮಾ ಕೇರ್ ಸೆಂಟರ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಆದರೆ, ಈ ಕಟ್ಟಡಗಳನ್ನು ಬೇರೆ ಸ್ಥಳಗಳಲ್ಲಿ ನಿರ್ಮಾಣ ಮಾಡಲಿ, ರೈತರ ಇಲಾಖಾ ಜಾಗಗಳನ್ನು ಬೇರೆ ಇಲಾಖೆಗಳಿಗೆ ಯಾವುದೇ ಕಾರಣಕ್ಕೂ ನೀಡಬಾರದು ಎಂದು ಅಧಿಕಾರಿಗಳಿಗೆ ಆಗ್ರಹಿಸಿದರು.

ತಾಲ್ಲೂಕಿನ ಆತಗೂರು ಮರು ಸರ್ವೇ ಕಾರ್ಯ ವಿಳಂಬವಾಗಿರುವುದರಿಂದ ಸಮಸ್ಯೆ ತಲೆದೋರಿದೆ. ಯಾವ ಅಧಿಕಾರಿಗಳು ಸಹ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ರೈತ ಮುಖಂಡ ಉಮೇಶ್ ಬೇಸರ ವ್ಯಕ್ತಪಡಿಸಿದರು.

ಅಷ್ಟೇ ಅಲ್ಲದೇ ತಾಲ್ಲೂಕಿನ ಕೊನೆ ಭಾಗದ ರೈತರಿಗೆ ನಾಲೆಗಳ ಮೂಲಕ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಆತಗೂರು ಹೋಬಳಿಯ ಮರು ಸರ್ವೇ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದರು.

ತಾ.ಪಂ ಇಒ ರಾಮಲಿಂಗಯ್ಯ, ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್, ವಲಯ ಅರಣ್ಯಾಧಿಕಾರಿ ಗವಿಯಪ್ಪ, ಟಿಎಚ್ಒ ಡಾ.ರವಿಶಂಕರ್, ಸಿಡಿಪಿಒ ಅರುಣ್ ಕುಮಾರ್ ಸೇರಿ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-40-784310211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.