ಮಂಡ್ಯ: ಕೆಆರ್ಎಸ್ ಅಣೆಕಟ್ಟೆ ವ್ಯಾಪ್ತಿಯ ಪ್ರದೇಶದಲ್ಲಿ ಭತ್ತದ ಫಸಲು ಕಾಳು ಕಟ್ಟುವ ಹಂತದಲ್ಲಿದ್ದು, ಬಿಸಿಲ ಬೇಗೆ ಹೆಚ್ಚಾಗಿರುವುದರಿಂದ ನಾಲೆಗಳಿಗೆ ಕೂಡಲೇ ನೀರು ಹರಿಸುವಂತೆ ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಸುಮಾರು 1.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಈಗ ಕಾಳು ಕಟ್ಟುವ ಹಂತವಾಗಿದೆ. ಕೆಆರ್ಎಸ್ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಿ ಭತ್ತದ ಫಸಲು ರಕ್ಷಿಸಿಕೊಳ್ಳಲು ನೆರವಾಗಬೇಕು ಎಂದಿದ್ದಾರೆ.

ಪ್ರಸ್ತುತದಲ್ಲಿ ಶೇ 60 ರಷ್ಟು ಭತ್ತದ ಬೆಳೆಗೆ ತುರ್ತಾಗಿ ಒಂದು ಕಟ್ಟು ನೀರು ಬೇಕಿದೆ. ಸಕಾಲಿಕವಾಗಿ ನೀರು ಹರಿಸದಿದ್ದರೆ ಭತ್ತದ ಫಸಲು ಅಪಾರ ಪ್ರಮಾಣದಲ್ಲಿ ನಾಶವಾಗಿ ಜೊಳ್ಳಾಗಲಿದೆ. ವಾಡಿಕೆಯಂತೆ ಮೇ 12 ರಂದು ನಾಲೆಗಳಿಗೆ ನೀರು ಹರಿಸಿದರೆ ಜಮೀನುಗಳಿಗೆ ತಲುಪಲು ಹೆಚ್ಚುವರಿಯಾಗಿ ಮೂರ್ನಾಲ್ಕು ದಿನದ ಅವಶ್ಯವಿದೆ. ಇದನ್ನು ಮನಗಂಡು ರೈತರಿಗೆ ನಷ್ಟ ತಪ್ಪಿಸಲು ಕೆಆರ್ಎಸ್ ಅಣೆಕಟ್ಟೆ ಪಾತ್ರದ ನಾಲೆಗಳಿಗೆ ತ್ವರಿತವಾಗಿ ನೀರು ಹರಿಸಬೇಕೆಂದು ಮನವಿ ಮಾಡಿದ್ದಾರೆ.

ಖರೀದಿ ಕೇಂದ್ರ ತೆರೆಯಿರಿ: ಭತ್ತ ಕಟಾವಿಗೆ ಮೊದಲೇ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಸನ್ನದ್ಧವಾಗಬೇಕು. ಭತ್ತ ಕಟಾವು ನಂತರದಲ್ಲಿ ಖರೀದಿ ಕೇಂದ್ರ ತೆರೆದರೆ ಭತ್ತ ದಲ್ಲಾಳಿಗಳ ಪಾಲಾಗಿ ರೈತರಿಗೆ ನಷ್ಟವಾಗಲಿದೆ. ಜೊತೆಗೆ ರೈತರಿಗೆ ರಸಗೊಬ್ಬರ ದಾಸ್ತಾನು ಕೊರತೆ ಇದ್ದು, ಯೂರಿಯಾ ಕೊರತೆಯಿಂದ ಹಲವಾರು ಬೆಳೆಗಳ ಬೆಳವಣಿಗೆಗೆ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ.

ಕಾರ್ಖಾನೆ ಆರಂಭಿಸಿ: ಜೂನ್ ತಿಂಗಳಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆ ಸೇರಿ ಎಲ್ಲ ಸಕ್ಕರೆ ಕಾರ್ಖಾನೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು. ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆಯಲ್ಲಿ ವಿದ್ಯುತ್ ನೀಡಬೇಕು. ಪರವಾನಗಿ ಭೂಮಾಪಕರು ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು, ರಾಜ್ಯ ಸರ್ಕಾರ ಭೂಮಾಪಕರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-40-2067009916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.