ಮಂಡ್ಯ: ರಾಜ್ಯದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಶೇ 56ಕ್ಕೆ ಊರ್ಜಿತ ಮಾಡಲು ಕೇಂದ್ರ ಸರ್ಕಾರ 9ನೇ ಶೆಡ್ಯೂಲ್ಗೆ ಸೇರಿಸುವಂತೆ ರಾಜ್ಯದ ಎಲ್ಲ ಪಕ್ಷಗಳ ನಾಯಕರು ಒತ್ತಡ ಹೇರುವಂತೆ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಹಾಗೂ ಲೋಕಸಭಾ ಮಾಜಿ ಸದಸ್ಯ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನೆರೆಯ ತಮಿಳುನಾಡು ರಾಜ್ಯದಲ್ಲಿ ಇದೇ ರೀತಿ ಕೇಂದ್ರದ ಮೇಲೆ ಒತ್ತಡ ಹಾಕಿ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರ ಕೂಡಲೇ ಸರ್ವ ಪಕ್ಷಗಳ ನಿಯೋಗವನ್ನು ಕರೆದೊಯ್ದು ಪ್ರಧಾನಿ ಭೇಟಿ ಮಾಡಿ ಶೇ 56ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸುವಂತೆ ಮತ್ತು ಸಂವಿಧಾನದ ಅನುಚ್ಛೇದ 15 ಮತ್ತು 16ಕ್ಕೆ ತಿದ್ದುಪಡಿ ತಂದು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಒತ್ತಾಯಿಸುವಂತೆ ಆಗ್ರಹಿಸಿದರು.

ಮೀಸಲಾತಿಯಲ್ಲಿ ಎಸ್ಸಿಗೆ ಶೇ 17ರಷ್ಟು, ಎಸ್ಪಿಗೆ ಶೇ 7ರಷ್ಟು ಓಬಿಸಿಗೆ ಶೇ 32ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ಸರ್ಕಾರ 2023ರ ಮಾರ್ಚ್ 22ರಂದು ಸರ್ವ ಪಕ್ಷಗಳ ಅನುಮೋದನೆ ಪಡೆದಿತ್ತು. ಇದನ್ನು ಜಾರಿ ಮಾಡಲು ಮುಂದಾದಾಗ ಹೈಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರ ಸರಿಯಾದ ವಾದ ಮಂಡಿಸಿ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀಸಲಾತಿ ಕಾಯ್ದೆಯನ್ನು 9ನೇ ಶೆಡ್ಯೂಲ್ಗೆ ಸೇರಿಸಲು 2026ರ ಏಪ್ರಿಲ್ 16ರಂದು ಪ್ರಧಾನಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಎಲ್ಲ ಪಕ್ಷಗಳು ನಮ್ಮ ಬದುಕಿನ ಜತೆ ಚೆಲ್ಲಾಟವಾಡದೇ ಅವರ ಅನುಮೋದನೆ ತಂದು ಮೀಸಲಾತಿ ಜಾರಿ ಮಾಡಲಿ ಎಂದು ಹೇಳಿದರು.

ಒಬಿಸಿಯ ಕೆಲವು ಜಾತಿಗಳನ್ನು ಎಸ್ಸಿಗೆ ಸೇರಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಹಾಗೆ ಮಾಡುವುದಾದರೆ ಆ ಜಾತಿಗಳ ಕುಲಶಾಸ್ತ್ರ ಅಧ್ಯಯನ ಮಾಡಬೇಕು. ಸದರಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗಾಯಿಸುವಂತೆ ಒತ್ತಾಯಿಸಿದರು.

ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಟಿ.ಆರ್. ತುಳಸೀರಾಮ್, ದೇವರಾಜು, ಮಂಜುನಾಥ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-40-344087197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.