ಮಂಡ್ಯ: ‘ಮಕ್ಕಳು ಮಣ್ಣು ಮುಟ್ಟಿದರೆ ಅಲರ್ಜಿ ಆಗುತ್ತದೆ ಎನ್ನುವ ಮನೋಭಾವದಲ್ಲಿ ಬದುಕುತ್ತಿರುವ ಹೊತ್ತಿನಲ್ಲಿ ಕ್ರೀಡಾ ಚಟುವಟಿಕೆಯ ಬೇಸಿಗೆ ಶಿಬಿರಗಳು ನಿಜವಾದ ಅರಿವು ಮೂಡಿಸುತ್ತವೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮನುಜಾಶ್ರೀ ಅಭಿಪ್ರಾಯಪಟ್ಟರು.

ನಗರದ ಗುತ್ತಲು ಕುವೆಂಪು ಶತಮಾನೋತ್ಸವ ಶಾಲಾ ಆವರಣದ ಬಿ.ಜಿ. ದಾಸೇಗೌಡ ಕ್ರೀಡಾಂಗಣದಲ್ಲಿ ಸ್ವರ್ಣ ಫುಟ್ಬಾಲ್ ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಫುಟ್ಬಾಲ್ ಸಂಸ್ಥೆ, ಯುವ ಸಬಲೀಕರಣ, ಕ್ರೀಡಾಇಲಾಖೆ ಸಹಯೋಗದಲ್ಲಿ ಶುಕ್ರವಾರ ಮುಕ್ತಾಯಗೊಂಡ 27ನೇ ವರ್ಷದ ಉಚಿತ ಫುಟ್ಬಾಲ್ ತರಬೇತಿ ಬೇಸಿಗೆ ಶಿಬಿರ ಸಮಾರೋಪದಲ್ಲಿ ಮಾತನಾಡಿದರು.

ಮಕ್ಕಳಿಗೆ ಗ್ರಾಮೀಣ ಭಾಗದ ಆಟಗಳ ಪರಿಚಯ ಮಾಡಿಕೊಡುವ ಮಾನಸಿಕ ಮತ್ತು ಬೌದ್ಧಿಕ ಚಟುವಟಿಕೆ ಅಭಿವೃದ್ಧಿಗೆ ಸಹಕರಿಸಬೇಕು ಎಂದರು. ಆಟೊ ನಾಗರಾಜು ಮಾತನಾಡಿದರು. ಸಂಸ್ಥೆಯ ರಾಜ್ಯ ಪ್ರತಿನಿಧಿ ಬಿ.ವೆಂಕಟ್, ಖಜಾಂಚಿ ಮೀರ್ ಅನೀಫ್, ಪದಾಧಿಕಾರಿ ಟಿ.ವರಪ್ರಸಾದ್, ತರಬೇತುದಾರರಾದ ವೇಣುಗೋಪಾಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-178901649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.