ಮದ್ದೂರು: ನಗರದ ಎಂ.ಎಚ್. ಚನ್ನೇಗೌಡ ವಿದ್ಯಾಲಯದಿಂದ ಸೇವಾ ಧುರೀಣ ಎಚ್.ಕೆ ವೀರಣ್ಣಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಜಯಂತಿ ಕಾರ್ಯಕ್ರಮವನ್ನು ಎಚ್.ಕೆ ವೀರಣ್ಣಗೌಡ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ರಾಯಚೂರು ಸಂಸದ ಜಿ. ಕುಮಾರ್ ನಾಯಕ್ ಉದ್ಘಾಟಿಸಿ ಮಾತನಾಡಿ, ಮಂಡ್ಯ ಜಿಲ್ಲೆ ಎಂದರೆ ಅಕ್ಷರದಿಂದ ದೂರವಿದ್ದ ಕಾಲದಲ್ಲೇ ಎಚ್. ಕೆ ವೀರಣ್ಣಗೌಡರು ಪತ್ರಿಕೆಯನ್ನು ಪ್ರಾರಂಭಿದ್ದರು. ರಾಜಕೀಯವಾಗಿ ತಮ್ಮದೇ ಚಾಪನ್ನು ಮೂಡಿಸಿದ್ದ ಎಸ್ .ಎಂ.ಕೃಷ್ಣ ಅವರದು ಮೇರು ವ್ಯಕ್ತಿತ್ವ ಎಂದರು. ಎಸ್.ಎಂ.ಕೃಷ್ಣ ಹಾಗೂ ಎಚ್.ಕೆ. ವೀರಣ್ಣಗೌಡ ಇಬ್ಬರೂ ಒಂದೊಂದು ವಿಶ್ವವಿದ್ಯಾಲಯವಿದ್ದಂತೆ ಎಂದರು.

ಮಂಡ್ಯ ಜಿಲ್ಲೆ ಇಂದು ಪುಸ್ತಕದ ಮನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಜ್ಞಾನದ ಕಣಜ ಎಂದು ರಾಷ್ಟ್ರ ಮಟ್ಟದಲ್ಲಿ ಸಾಬೀತುಪಡಿಸಿದೆ ಎಂದು ಪುಸ್ತಕದ ಮನೆ ಅಂಕೇಗೌಡರ ಕಾರ್ಯವನ್ನು ಶ್ಲಾಘಿಸಿದರು. ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಎಸ್.ಎಂ. ಕೃಷ್ಣ ಹಾಗೂ ಎಚ್.ಕೆ. ವೀರಣ್ಣಗೌಡ ಇಬ್ಬರೂ ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿದ್ದಾರೆ. ಎಸ್.ಎಂ.ಕೃಷ್ಣ ಅವರ ಯೋಜನೆಗಳಿಗೆ ಆಧುನಿಕತೆಯ ಸ್ಪರ್ಶ ನೀಡಿ ಬೆಂಗಳೂರನ್ನು ಸಿಂಗಪುರ ಮಾಡಲು ಹೊರಟ ಯೋಜನೆಗಳ ಹರಿಕಾರ ಎಂದರು. ನುಡಿನಮನ ಸಲ್ಲಿಸಿ ಮಾತನಾಡಿದ, ಪ್ರೊ. ಜಯಪ್ರಕಾಶ್ ಗೌಡ, ಎಚ್.ಕೆ ವೀರಣ್ಣಗೌಡರು ಶಿವಪುರ ಧ್ವಜ ಸತ್ಯಾಗ್ರಹದೊಂದಿಗೆ ಕಾಲ್ನಡಿಗೆಯಲ್ಲಿ ದೊಡ್ಡ ಮಟ್ಟದ ಚಳವಳಿಯನ್ನು ಮಾಡಿದ ಕೀರ್ತಿ ಸಲ್ಲುತ್ತದೆ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದ ಎಸ್.ಎಂ. ಕೃಷ್ಣ ಅವರಿಗೆ ಪ್ರಧಾನಿಯಾಗುವ ಅರ್ಹತೆ ಇತ್ತು ಎಂದರು.

ಎಂ. ಅಂಕೇಗೌಡ ಮತ್ತು ಶ್ರೀಮತಿ ವಿಜಯಲಕ್ಷ್ಮಿ ಅಂಕೇಗೌಡ ಅವರನ್ನು ಎಚ್. ಕೆ ವೀರಣ್ಣಗೌಡ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯಲ್ಲಿ ನಿವೃತ್ತರಾದ ಸಿಬ್ಬಂದಿ, ಹಿರಿಯ ವಿದ್ಯಾರ್ಥಿಗಳು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ದರ್ಶ್ ಮರಿಯಪ್ಪ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಆದಿಚುಂಚನಗಿರಿ ಪೀಠದ ಶಾಖಾಮಠದ ಶ್ರೀ ಸತ್ಕೀರ್ತಿನಾಥ ಸ್ವಾಮೀಜಿ, ಸಂಸ್ಥೆಯ ಗೌರವ ಅಧ್ಯಕ್ಷ ಕೆ.ಟಿ.ಚಂದು, ಅಧ್ಯಕ್ಷ ಸ್ವರೂಪ್ ಚಂದ್, ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ, ಖಜಾಂಚಿ ಶಿವರಾಮು, ಪ್ರಾoಶುಪಾಲ ಶಿವಕುಮಾರ್ , ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-40-1299829654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.