ಮಂಡ್ಯ: ಇತ್ತೀಚಿಗೆ ಕೆ.ಆರ್. ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡಿರುವುದನ್ನು ಲೋಕಾಯುಕ್ತ ಪೊಲೀಸರು ಬಹಿರಂಗಗೊಳಿಸಿದ್ದಾರೆ. ಜಿಲ್ಲೆಯ ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಬೇಕು ಎಂದು ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳ ಬಗ್ಗೆ ದೂರು ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ನಿಯಮನುಸಾರವಾಗಿ ವಿವರಗಳನ್ನು ನಮೂದಿಸಿಲ್ಲದಿರುವ ಬಗ್ಗೆ ವರದಿಯಾಗಿದೆ. ಎಲ್ಲ ಅಧಿಕಾರಿಗಳೊಂದಿಗೆ ಜಿಲ್ಲಾ ಸಮಿತಿಯನ್ನು ಕರೆದು ಸಭೆಯನ್ನು ನಡೆಸಲಾಗಿದೆ. ‘ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 (ಪಿ.ಸಿ.ಪಿ.ಎನ್.ಡಿ.ಟಿ) ಪ್ರಕಾರ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಬಾಗಿಲು ಮುಚ್ಚಿಸಿ: ಕೆ.ಆರ್.ಪೇಟೆ ಪಟ್ಟಣದಲ್ಲಿ 31 ಬಾಲಗರ್ಭಿಣಿಯರಿಗೆ ಅಕ್ರಮವಾಗಿ ಸ್ಕ್ಯಾನಿಂಗ್ ಮಾಡಿ, ಲೋಪ ಎಸಗಿರುವ ಎರಡು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳ ವಿರುದ್ಧ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ. ಎರಡೂ ಸೆಂಟರ್ಗಳ ಲೈಸೆನ್ಸ್ ರದ್ದುಪಡಿಸಿ, ಬಾಗಿಲು ಮುಚ್ಚಿಸಿ ಎಂದು ಡಿಎಚ್ಒ ಡಾ.ಮೋಹನ್ ಅವರಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದರು.

18 ವರ್ಷದೊಳಗಿನವರು ಸ್ಕ್ಯಾನಿಂಗ್ಗೆ ಬಂದಾಗ ಪೋಕ್ಸೊ ಕಾಯ್ದೆ ಪ್ರಕಾರ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆ ಮತ್ತು ಸಂಬಂಧಪಟ್ಟ ಪ್ರಾಧಿಕಾರಕ್ಕೆ ವರದಿ ಮಾಡಬೇಕು. ಕಾನೂನು ಉಲ್ಲಂಘನೆ ಮಾಡಿರುವ ಸ್ಕ್ಯಾನಿಂಗ್ ಸೆಂಟರ್ಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಕಾಯ್ದೆ ಪ್ರಕಾರ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣೆ ಮಾಡಿ ಮಾಸಿಕ ವರದಿ ಸಲ್ಲಿಸಬೇಕು ಹಾಗೂ ಭ್ರೂಣಲಿಂಗ ಪತ್ತೆಯು ಅಪರಾಧ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ ಎಂ, ಜಿಲ್ಲಾ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬೆಟ್ಟಸ್ವಾಮಿ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸೋಮಶೇಖರ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಕುಮಾರ್, ಮಲೇರಿಯಾ ನಿಯಂತ್ರಣ ಅಧಿಕಾರಿ ಕಾಂತರಾಜು, ಡಾ.ಕೆ.ಪಿ. ಅಶ್ವಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-40-2055694280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.