ಮಂಡ್ಯ: ನಿವೇಶನ ರಹಿತರ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸಭೆ ನಡೆಸಬೇಕು. ಅರ್ಹ ನಿವೇಶನ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ನಾವು ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆಯ ಕಾರ್ಯಕರ್ತರು ಮತ್ತು ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು ಮತ್ತು ನಗರ ವ್ಯಾಪ್ತಿಯ ನಿವೇಶನ ರಹಿತರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.

ನಗರ ವ್ಯಾಪ್ತಿ ಮತದಾರರಲ್ಲಿ ಯಾರಿಗೂ ವಾಸಿಸಲು ಒಂದು ಸ್ವಂತಕ್ಕೂಂದು ಮನೆ ಇಲ್ಲವೋ ಅಂತಹ ಬಡ ಜನರಿಗೆ ಯಾವುದೇ ಜಾತಿ, ಧರ್ಮ ನೋಡದೇ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು. ಮುಖಂಡ ಹನಕೆರೆ ಅಭಿ ಮಾತನಾಡಿ, ‘ಜಿಲ್ಲಾಡಳಿತ ನಮ್ಮ ಹೋರಾಟಕ್ಕೆ ಸ್ಪಂದಿಸಿ ಯಾರ ಬಳಿ ಅರ್ಜಿ ಸ್ವೀಕರಿಸಿದ್ದರೋ ಆ ಅರ್ಜಿಗಳನ್ನು ಪರಿಶೀಲಿಸಿ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿರುವುದು ಒಳ್ಳೆಯ ಕೆಲಸ. ಜೊತೆಗೆ ಅರ್ಜಿ ತಿರಸ್ಕಾರ ಮಾಡಿರುವ ಕಡೆ ಸಭೆ ಕರೆದು ಜಿಲ್ಲಾಧಿಕಾರಿ ಚರ್ಚೆ ನಡೆಸಬೇಕು’ ಎಂದು ಆಗ್ರಹಿಸಿದರು.

ನಿವೇಶನ ರಹಿತರನ್ನು ಕಡೆಗಣಿಸಿರುವ ಸರ್ಕಾರ ಮತ್ತು ಸಂಬಂಧ ಪಟ್ಟ ಇಲಾಖೆಯ ನಡೆ ಸರಿಯಿಲ್ಲ. ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿ ರಾಜಕಾರಣ ಮಾಡುತ್ತಿರುವ ಶಾಸಕರಾಗಲೀ ಹಾಗೂ ಸಂಸದರಾಗಲಿ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಇದು ಮುಂದುವರಿದರೆ ನಿರಂತರ ಪ್ರತಿಭಟನೆಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಮೋಹನ್, ರಮೇಶ್, ಕೌಸಲ್ಯಾ, ಸುಚಿತ್ರಾ, ಹನ್ಸಿಯಾ ಬಾನು, ಸಚಿನ್, ನಂದಿನಿ, ಆಫಿಯಾ, ಸಮೀರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-40-1947274628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.