‘ನಕಲಿ ಕಾರ್ಮಿಕ ಕಾರ್ಡ್ ಪತ್ತೆ ಹಚ್ಚಿ’
ಕಾರ್ಮಿಕ ಇಲಾಖೆಯಿಂದ ನಕಲಿ ಕಾರ್ಮಿಕ ಗುರುತಿನ ಚೀಟಿ ಪಡೆದು ನಿಜವಾದ ಕಾರ್ಮಿಕರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ಅನರ್ಹರು ಪಡೆಯುತ್ತಿದ್ದಾರೆ. ಸರ್ಕಾರಿ ಸೌಲಭ್ಯ ನೀಡಬೇಕಾದರೆ ಕಾರ್ಮಿಕರು ಕೆಲಸ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೌಲಭ್ಯ ನೀಡಿ ಎಂದು ಜಿಲ್ಲಾಧಿಕಾರಿ ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸ್ಲಮ್ ನಲ್ಲಿ ಇರುವ ಮಕ್ಕಳಿಗೆ ವಿಶೇಷ ಆಧಾರ್ ಶಿಬಿರವನ್ನು ಏರ್ಪಡಿಸಿ ಎಲ್ಲ ಮಕ್ಕಳಿಗೂ ಆಧಾರ್ ನೋಂದಣಿ ಮಾಡಿ ಇಲ್ಲದಿದ್ದಲ್ಲಿ ಅವರಿಗೆ ಸರಿಯಾಗಿ ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.