ಮಂಡ್ಯ: ಜಿಲ್ಲಾ ವಕೀಲರ ಸಂಘದ ವತಿಯಿಂದ ಮೇ 2ರ ಶನಿವಾರ ಸಂಜೆ 5 ಗಂಟೆಗೆ ಸಂಘದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ‘ಎಸ್.ಎಂ.ಕೃಷ್ಣ ಸಂಸ್ಮರಣೆ’ ಕಾರ್ಯಕ್ರಮ ನಡೆಯಲಿದೆ.

ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಮುಕ್ತಿದಾನಂದ ಮಹಾರಾಜ್ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು.

75 ವಸಂತಗಳನ್ನು ಪೂರೈಸಿದ ಹಿರಿಯ ವಕೀಲ ಹಾಗೂ ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರಿಗೆ ವಕೀಲರ ಸಂಘದ ಸಹೋದ್ಯೋಗಿ ಮಿತ್ರರಿಂದ ಅಭಿನಂದನಾ ಸಮರ್ಪಣೆ ಏರ್ಪಡಿಸಲಾಗಿದೆ. ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಅವರು ಗೌರವ ಸಮರ್ಪಣೆ ನೆರವೇರಿಸಲಿದ್ದಾರೆ.

ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ಸತ್ಯಾನಂದ ಅಧ್ಯಕ್ಷತೆ ವಹಿಸುವರು. ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ. ಸುಧಾಕರ್ ಅವರು ಎಸ್.ಎಂ. ಕೃಷ್ಣ ಕುರಿತು ಮಾತನಾಡುವರು. ಶಾಸಕರಾದ ಪಿ. ರವಿಕುಮಾರ್, ಕೆ.ಎಂ.ಉದಯ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮತ್ತು ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆಗೆ ಸುಮಧುರ ವಾದ್ಯಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಬಿ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-1737156546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.