ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಬರಹ, ದ್ವೇಷ, ಅಶಾಂತಿ ಹಾಗೂ ಕೋಮು ಸಂಘರ್ಷ ಉಂಟು ಮಾಡುವಂತಹ ಪೋಸ್ಟ್ ಹಾಕಿದವರ ವಿರುದ್ಧ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ.

2023ರಲ್ಲಿ ಒಟ್ಟು 11 ಪ್ರಕರಣ, 2024ರಲ್ಲಿ 38 ಪ್ರಕರಣ ಹಾಗೂ 2025ರ ಆಗಸ್ಟ್ 12ರವರೆಗೆ ಬರೋಬ್ಬರಿ 60 ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಇತರ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ.

ಗಂಭೀರ ಅಪರಾಧ ಪ್ರಕರಣಗಳಲ್ಲಿ ‘ಎಫ್ಐಆರ್’ ಮತ್ತು ಸಣ್ಣಪುಟ್ಟ ಅಪರಾಧ ಪ್ರಕರಣಗಳಲ್ಲಿ ‘ಎನ್.ಸಿ.ಆರ್’ ದಾಖಲಾಗುತ್ತದೆ. ಪದೇ ಪದೇ ಅವಹೇಳನಕಾರಿಯಾಗಿ ಪೋಸ್ಟ್ ಮಾಡುವವರನ್ನು ತಹಶೀಲ್ದಾರ್ ಕೋರ್ಟ್ಗೆ ಹಾಜರುಪಡಿಸಿ, ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವ ಪ್ರಕರಣಗಳನ್ನು ‘ಪಿ.ಎ.ಆರ್’ ಎಂದು ಕರೆಯಲಾಗುತ್ತದೆ.

ಸಾರ್ವಜನಿಕರಿಗೆ ಭಯ ಹುಟ್ಟಿಸುವ, ಗಲಭೆಗೆ ಕಾರಣವಾಗುವ, ಕೋಮು ಪ್ರಚೋದನೆ ನೀಡುವ.. ಹೀಗೆ ವಿವಿಧ ರೀತಿಯಲ್ಲಿ ಜಾಲತಾಣಗಳ ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಕೃತಕ ಬುದ್ಧಿಮತ್ತೆಯಿಂದ ರೂಪಿಸಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಎಂಬಾತನನ್ನು ಮೇ 9ರಂದು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದರು.

ಮಾನಿಟರಿಂಗ್ ಸೆಲ್:

ಸಾಮಾಜಿಕ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರನ್ನು ನಿಯಂತ್ರಿಸಲು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ‘ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ ತೆರೆಯಲಾಗಿದೆ.

ಪ್ರತಿ ಠಾಣೆಯಲ್ಲಿ ಇಬ್ಬರು ಸಿಬ್ಬಂದಿ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕವಾಗಿ ಒಬ್ಬ ನೋಡಲ್ ಅಧಿಕಾರಿ ಹಾಗೂ ನಾಲ್ವರು ಸಿಬ್ಬಂದಿಯನ್ನು ನೇಮಿಸಿ, ಆನ್ಲೈನ್ ಮಾನಿಟರಿಂಗ್ ಮಾಡುವ ಮೂಲಕ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವಿಷಯಗಳನ್ನು ಪರಿಶೀಲಿಸಲಾಗುತ್ತಿದೆ.

‘ಅವಹೇಳನಕಾರಿ ಪೋಸ್ಟ್ಗಳನ್ನು ತಕ್ಷಣ ಗುರುತಿಸಿ, ಸಂಬಂಧಿಸಿದ ಪೊಲೀಸ್ ಠಾಣೆಗೆ ವರದಿ ಮಾಡಲಾಗುತ್ತದೆ. ಅಂತಹ ವ್ಯಕ್ತಿಗಳನ್ನು ಗುರುತಿಸಿ, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಸುಳ್ಳು ಮಾಹಿತಿ ಹರಡುವವರ ವಿರುದ್ಧ ಪ್ರಕರಣ ದಾಖಲಿಸಿ, ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸ್ಪಷ್ಟನೆ ನೀಡಲಾಗುತ್ತದೆ’ ಎನ್ನುತ್ತಾರೆ ಹೆಚ್ಚುವರಿ ಎಸ್ಪಿ ಎಸ್.ಇ. ಗಂಗಾಧರಸ್ವಾಮಿ.

ಶಾಂತಿ ಸಭೆ, ಜಾಗೃತಿ ಕಾರ್ಯಕ್ರಮ ಹಾಗೂ ನಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಜಾಗೃತಿ ಪೋಸ್ಟ್ಗಳನ್ನು ಹಾಕುವ ಮೂಲಕ ಜನರಲ್ಲಿ ಜವಾಬ್ದಾರಿಯುತವಾಗಿ ಜಾಲತಾಣ ಬಳಸುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗೆ ನಿಂದನೆ; ಇಬ್ಬರ ಬಂಧನ

ಕುರುಬ ಸಮುದಾಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಕೆಲದಿನಗಳ ಹಿಂದೆ ಹರಿದಾಡಿತ್ತು. ಈ ಬಗ್ಗೆ ತಾಲ್ಲೂಕಿನ ಬಸರಾಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕುರುಬ ಸಮುದಾಯದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ನಂತರ ಆ.13ರಂದು ‘ಬಸರಾಳು ಬಂದ್’ ಕೂಡ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ತಾಲ್ಲೂಕಿನ ಬೆನ್ನಟ್ಟಿ ಗ್ರಾಮದ ಕುಮಾರ ಮತ್ತು ಶಾನುಭೋಗನಹಳ್ಳಿ ಗ್ರಾಮದ ಮಹೇಶ್ ಎಂಬ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

Cut-off box - ///ಎಸ್ಪಿ ಮಗ್ಶಾಟ್ ಬಳಸಿ/// 70 ಖಾತೆಗಳ ವಿರುದ್ಧ ‘ವಿಶೇಷ ನಿಗಾ’ ‘ನಿರಂತರವಾಗಿ ಸುಳ್ಳು ಸುದ್ದಿ ಹರಡುವ ಅವಹೇಳನಕಾರಿ ಪೋಸ್ಟ್ ಮಾಡುವ ಜಿಲ್ಲೆಯ 70 ಖಾತೆಗಳ ಮೇಲೆ ‘ವಿಶೇಷ ನಿಗಾ’ ಇಡಲಾಗಿದೆ. ಪ್ರಕರಣಗಳು ಕೂಡ ದಾಖಲಾಗುತ್ತಿವೆ. ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳನ್ನು ಎಚ್ಚರಿಕೆಯಿಂದ ಬಳಸಬೇಕು. ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ’ ಎನ್ನುತ್ತಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.