ಮಂಡ್ಯ: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ‘ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳು’ ಜಾರಿಗೊಳಿಸಿದೆ. ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮತ್ತು ನಿರ್ವಹಣೆ ಮಾಡದಿರುವುದು ಪರಿಸರ ಹಾಗೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬರುತ್ತದೆ ಎಂದರು.

ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ 4 ವಿಧಗಳ ತ್ಯಾಜ್ಯ ವಿಂಗಡಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಇವುಗಳ ಸಂಗ್ರಹಣೆ, ಸಾಗಾಣಿಕೆ ಹಾಗೂ ಸಂಸ್ಕರಣೆ, ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಸೂಚಿಸಿದರು. ನೂತನ ನಿಯಮ ಉಲ್ಲಂಘನೆ ಮಾಡುವ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ಕಡ್ಡಾಯವಾಗಿ ದಂಡ ವಿಧಿಸಬೇಕು ಹಾಗೂ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳಿಗೆ ನೀರಿನ ಸಂಪರ್ಕ ಕಡಿತಗೊಳಿಸಲು ಕ್ರಮವಹಿಸಲು ಸೂಚಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-1251228335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.