ಮಂಡ್ಯ: ‘ಐಪಿಎಲ್ ಬೆಟ್ಟಿಂಗ್, ಇಸ್ಪೀಟ್ ದಂಧೆ ಮತ್ತು ಅಕ್ರಮ ಮದ್ಯ ಮಾರಾಟ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡುತ್ತೇನೆ. ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ಮುಕ್ತವಾಗಿ ದೂರು ಸಲ್ಲಿಸಿ, ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ದೂರು ಕೊಟ್ಟವರ ಹೆಸರನ್ನು ಗೋಪ್ಯವಾಗಿಡಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವಿ.ಜೆ. ಹೇಳಿದರು.

ಮಂಡ್ಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪೊಲೀಸ್ ಮತ್ತು ಮಾಧ್ಯಮದವರ ನಡುವೆ ಪರಸ್ಪರ ಸಹಕಾರ ಅಗತ್ಯ. ಅಕ್ರಮ ಮತ್ತು ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಎಂದು ಸಹಕಾರ ಕೋರಿದರು.

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಆದ್ಯತೆ ನೀಡಲಾಗುವುದು. ಹೆಣ್ಣು ಭ್ರೂಣ ಹತ್ಯೆ, ಸರಗಳ್ಳತನ ಕೃತ್ಯಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತೇನೆ. ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ತಿಳಿಸಿದರು.

ಮಂಡ್ಯ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ, ಪಾರ್ಕಿಂಗ್ ಸಮಸ್ಯೆ, ಪಾದಚಾರಿ ಮಾರ್ಗ ಒತ್ತುವರಿ ಬಗ್ಗೆ ಮಾಧ್ಯಮದವರು ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ದುರಸ್ತಿ ಮತ್ತು ಎಎಂಸಿ ಮುಗಿದಿದ್ದರೆ, ಟೆಂಡರ್ ಕರೆದು ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತೇನೆ. ‘ಪಬ್ಲಿಕ್ ಸೇಫ್ಟಿ ಆ್ಯಕ್ಟ್’ ಯೋಜನೆಯಡಿ ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮವಹಿಸುತ್ತೇನೆ ಎಂದರು.

‘ಬಳ್ಳಾರಿಯ ಶಾಸಕ ಜನಾರ್ದನ ರೆಡ್ಡಿ ಅವರ ಮಾತುಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬಳ್ಳಾರಿಯಲ್ಲಿದ್ದಾಗ ದಕ್ಷತೆಯಿಂದ ಕೆಲಸ ಮಾಡಿದ ಆತ್ಮತೃಪ್ತಿ ತಮಗಿದೆ. ಅಲ್ಲಿನ ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಬಳ್ಳಾರಿಯ ಜನರು ಮುಗ್ಧರು ಮತ್ತು ಒಳ್ಳೆಯವರು. ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡಿದ್ದು ತೃಪ್ತಿ ತಂದಿದೆ’ ಎಂದರು.

‘ಗಾಂಜಾ ಡ್ರಗ್ಸ್ ಮಾರಾಟ ವಿರುದ್ಧ ಕ್ರಮ’

ಗಾಂಜಾ ಡ್ರಗ್ಸ್ ಚಟುವಟಿಕೆಗಳು ಜಿಲ್ಲೆಯಲ್ಲಿ ಹೆಚ್ಚಾಗಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದೇನೆ. ಜಿಲ್ಲೆಯ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಅವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಎಸ್ಪಿ ಶೋಭಾರಾಣಿ ಉತ್ತರಿಸಿದರು.

15 ವರ್ಷಗಳ ನನ್ನ ಸೇವಾ ಅವಧಿಯಲ್ಲಿ ಮಂಡ್ಯ ಜಿಲ್ಲೆಯಲ್ಲೇ ಮೂರೂವರೆ ವರ್ಷ ಕೆಲಸ ಮಾಡಿದ್ದೇನೆ. ಈ ಹಿಂದೆ ಮಂಡ್ಯ ಡಿವೈಎಸ್ಪಿ ಮತ್ತು ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿರುವ ಅನುಭವವಿದೆ. ಇದೀಗ ಎಸ್ಪಿಯಾಗಿ ಪುನಃ ಮಂಡ್ಯಗೆ ವರ್ಗಾವಣೆಯಾಗಿ ಬಂದಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.