ಮಂಡ್ಯ: ಜಿಲ್ಲೆಯಲ್ಲಿ ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಕಲ್ಪಿಸುವ ಉದ್ದೇಶಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರವು ₹14 ಕೋಟಿ ಮಂಜೂರು ಮಾಡಿದೆ.

ಜಿಲ್ಲೆಯಲ್ಲಿ ಕ್ರೀಡಾ ಸೌಕರ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೇಂದ್ರ ಕ್ರೀಡಾ ಮತ್ತು ಯುವಜನ ಸಬಲೀಕರಣ ಖಾತೆ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರ ಬರೆದಿದ್ದರು.

ಮನವಿಗೆ ಸ್ಪಂದಿಸಿದ ಕ್ರೀಡಾ ಸಚಿವ, ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಬಹುಪಯೋಗಿ ಕ್ರೀಡಾ ಸೌಲಭ್ಯ ನಿರ್ಮಾಣಕ್ಕೆ ₹14 ಕೋಟಿ ಮಂಜೂರು ಮಾಡಿದ್ದು, ಈ ಅನುಮೋದಿತ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಮತ್ತು ರಾಷ್ಟ್ರವನ್ನು ಪ್ರತಿನಿಧಿಸಿದ್ದಾರೆ. ಯುವ ಪ್ರತಿಭೆಗಳು ಜಿಲ್ಲೆಯಲ್ಲಿ ಅವಕಾಶ ಸಿಗದೆ ಹೊರ ಭಾಗಗಳಲ್ಲಿ ತರಬೇತಿಗೆ ಹೋಗುತ್ತಿದ್ದಾರೆ. ಅನೇಕ ಕ್ರೀಡಾಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇಂತಹ ಸೌಕರ್ಯವನ್ನು ಮಂಡ್ಯದಲ್ಲಿಯೇ ಒದಗಿಸುವ ಉದೇಶದಿಂದ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿರುವುದರಿಂದ ನೆರವಾಗಲಿದೆ.

‘ಮನವಿಗೆ ಸ್ಪಂದಿಸಿದ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.