ಶ್ರೀರಂಗಪಟ್ಟಣ: ತಾಲ್ಲೂಕಿನ ತರೀಪುರ ಗ್ರಾಮದ ಸ.ನಂ.4ರಲ್ಲಿ, ಹೆಬ್ಬಾಡಿ ಗ್ರಾಮದ ಕೆ. ಜವರಯ್ಯ ಅವರಿಗೆ 4 ಎಕರೆ ಜಮೀನು ದರಖಾಸ್ತು ಮೂಲಕ ಮಂಜೂರಾಗಿದ್ದರೂ ಅವರ ಮಕ್ಕಳ ಹೆಸರಿನ ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ತಾಲ್ಲೂಕು ಕಚೇರಿ ಎದುರು ಅಂಬೇಡ್ಕರ್ ಭಾವಚಿತ್ರ ಇಟ್ಟು ಒಂದು ತಾಸಿಗೂ ಹೆಚ್ಚು ಪ್ರತಿಭಟನೆ ನಡೆಸಿದರು. ತಾಲ್ಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು.

‘ಕೆ. ಜವರಯ್ಯ ಅವರಿಗೆ ಮೂರು ದಶಕಗಳ ಹಿಂದೆ ಸರ್ಕಾರ 4 ಎಕರೆ ಜಮೀನು ಮಂಜೂರು ಮಾಡಿದ್ದು, ಕೆ.ಜವರಯ್ಯ ನಿಧನರಾದ ಬಳಿಕ ಅವರ ಮಕ್ಕಳು ಉಳುಮೆ ಮಾಡುತ್ತಿದ್ದಾರೆ. ಸದರಿ ಜಮೀನನ್ನು ಕೆ. ಜವರಯ್ಯ ಅವರ ಮಕ್ಕಳ ಹೆಸರಿಗೆ ಖಾತೆ ಮಾಡಿಕೊಡುವಂತೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಖಾತೆ ಮಾಡಿಕೊಟ್ಟಿಲ್ಲ. ಒಂದು ತಿಂಗಳ ಒಳಗೆ ಜಮೀನು ದುರಸ್ತು ಮಾಡಿ ಪೌತಿ ಖಾತೆ ಮಾಡದಿದ್ದರೆ ಪಟ್ಟಣದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಕೆ.ಎಂ. ಸಂದೇಶ್ ಎಚ್ಚರಿಸಿದರು.

‘ಹೆಬ್ಬಾಡಿ ಗ್ರಾಮದ ಚಿಕ್ಕತಾಯಮ್ಮ, ಪುಟ್ಟಸ್ವಾಮಿ, ಚಿಕ್ಕಮರಿಲಿಂಗಯ್ಯ ಇತರರಿಗೆ ಸರ್ಕಾರ ದರಖಾಸ್ತು ಮೂಲಕ ಮಂಜೂರು ಮಾಡಿ ಸಾಗುವಳಿ ಪತ್ರ ನೀಡಿರುವ ಜಮೀನನ್ನು ಅಧಿಕಾರಿಗಳು ದುರಸ್ತು ಮಾಡದೆ ವಿಳಂಬ ಮಾಡುತ್ತಿದ್ದಾರೆ. ದಲಿತರಿಗೆ ಸರ್ಕಾರ ಮಂಜೂರು ಮಾಡಿರುವ ಜಮೀನನ್ನು ಬಲಾಢ್ಯರು ಅತಿಕ್ರಮಿಸುವ ಹುನ್ನಾರ ನಡೆಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ ನಮ್ಮ ನೆರವಿಗೆ ಬರುತ್ತಿಲ್ಲ’ ಎಂದು ಪಿಕಾರ್ಡ್ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಪುಟ್ಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಎಚ್.ಕೆ. ಮಂಜುನಾಥ್, ಶ್ರೀಕಂಠು, ಬಾಲರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-40-306135784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.