ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ, ಭ್ರಷ್ಟಾಚಾರ, ಲೂಟಿಗಳ ಬಗ್ಗೆ ನಿಷ್ಕ್ರಿಯವಾಗಿರುವ ತಾಲ್ಲೂಕು ಆಡಳಿತ ವ್ಯವಸ್ಥೆಯನ್ನು ಖಂಡಿಸಿ, ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ನೇತೃತ್ವದಲ್ಲಿ ಭೂಮಿತಾಯಿ ಹೋರಾಟ ಸಮಿತಿಯ ಕಾರ್ಯಕರ್ತರು ಶನಿವಾರ ಧರಣಿ ನಡೆಸಿದರು.

ನಗರದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಾಗಿಬಂದ ಕಾರ್ಯಕರ್ತರು ಭೂಗಳ್ಳರು ಹಾಗೂ ಅದಕ್ಕೆ ಸಹಕಾರ ನೀಡುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಭೂಗಳ್ಳತನ ನಡೆಯುತ್ತಿದೆ. ಹಲವು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದು, ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ನೂರಾರು ಎಕರೆ ಭೂಮಿ ಕಾಣೆಯಾಗಿದೆ. ₹1000 ಕೋಟಿಗಿಂತಲೂ ಅಧಿಕ ಮೌಲ್ಯದ ಭೂಮಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.

ತಾಲ್ಲೂಕು ಆಡಳಿತದಲ್ಲಿನ ಭ್ರಷ್ಟ ಅಧಿಕಾರಿಗಳಿಂದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪ್ರಭಾವಿಗಳಿಗೆ ಖಾತೆ ಮಾಡಿಕೊಡಲಾಗುತ್ತಿದೆ. ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅನಧಿಕೃತವಾಗಿ ಜಿಲ್ಲೆ ಪ್ರವೇಶಿಸುತ್ತಿರುವ ಜಿಲೆಟಿನ್ ಬಗ್ಗೆಯೂ ಸೂಕ್ತ ತನಿಖೆ ನಡೆಸದ ಜಿಲ್ಲಾಡಳಿತ, ಕಂದಾಯ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಬಾಹ್ಯ ಬೆಂಬಲ ನೀಡುತ್ತಿದೆ. ಅಕ್ರಮ ಗಣಿಗಾರಿಕೆ ತಡೆಯಲು ತಡೆಯಲು ಸ್ಫೋಟಕ ನಿಯಂತ್ರಣ ಕಾಯ್ದೆ ಜಾರಿ ಮಾಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮೀತಿಯ ಪಾಪೇಗೌಡ, ಭಾಸ್ಕರ, ಲೋಕೇಶ, ಜವರೇಗೌಡ, ಗಿರಿಜಮ್ಮ, ಪುಟ್ಟಸಿದ್ದಮ್ಮ, ಅರ್ಚನ, ಚನ್ನೇನಹಳ್ಳಿ ಯೋಗೇಶ, ಪುಟ್ಟಮಾದು, ಎಂ.ವಿ.ಕೃಷ್ಣ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-223913376

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.