ಶ್ರೀರಂಗಪಟ್ಟಣ: ‘ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಪಟ್ಟಣದ ಪ್ರಮುಖ ವೃತ್ತಕ್ಕೆ ಇಡಬೇಕು’ ಎಂದು ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿ. ಸ್ವಾಮಿಗೌಡ ಆಗ್ರಹಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ ಪಟ್ಟಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ನೀರಾವರಿ, ಕೈಗಾರಿಕೆ, ಶಿಕ್ಷಣ, ಕೃಷಿ, ವಿದ್ಯುತ್ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಗತಿಗೆ ಕೊಡುಗೆ ನೀಡಿದ್ದರು. ಅವರ ಹೆಸರನ್ನು ಚಿರಸ್ಥಾಯಿಗೊಳಿಸಬೇಕು’ ಎಂದು ಒತ್ತಾಯಿಸಿದರು. ವಕೀಲ ಸಿ.ಎಸ್. ವೆಂಕಟೇಶ್, ‘ನಾಲ್ವಡಿ ಅವರ ಸೇವೆ ಮಾದರಿ ಯಾದುದು. ಅವರ ಹೆಸರಿನಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಬೇಕು’ ಎಂದು ಹೇಳಿದರು. ತಹಶೀಲ್ದಾರ್ ಚೇತನಾ ಯಾದವ್, ತಾಲ್ಲೂಕು ಯೋಜನಾಧಿಕಾರಿ ಎಂ.ಎಂ. ತ್ರಿವೇಣಿ, ಪುರಸಭೆ ಮಾಜಿ ಸದಸ್ಯರಾದ ಕೃಷ್ಣಪ್ಪ, ಎಂ. ಶ್ರೀನಿವಾಸ್, ಬಸವರಾಜು, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರಬಾಬು, ಮುಖಂಡರಾದ ಗೌಡಹಳ್ಳೀ ದೇವರಾಜು, ಎಂ. ಸುರೇಶ್, ಜಗದೀಶ್, ಎಲ್. ಮಂಜುನಾಥ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-976539318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.