ಶ್ರೀರಂಗಪಟ್ಟಣ: ತಾಲ್ಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯದಲ್ಲಿ ತಡೆ, ಕಟ್ಟೆ ಮತ್ತು ಮೊಟ್ಟೆ ಒಡೆಯುವರು ಭಕ್ತರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದು, ಅದನ್ನು ತಡೆಯಬೇಕು ಎಂದು ಆಗ್ರಹಿಸಿ ಬುಧವಾರ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

‘ಅಹಲ್ಯಾದೇವಿ ದೇವಾಲಯದಲ್ಲಿ ತಡೆ ಒಡೆಯಲು, ಕಲ್ಯಾಣಿಯಲ್ಲಿ ಕಟ್ಟೆ ಒಡೆಯಲು ಮತ್ತು ಮೊಟ್ಟೆ ಒಡೆಯಲು ಪ್ರತ್ಯೇಕವಾಗಿ ಹಣ ಕೇಳುತ್ತಾರೆ. ಒಬ್ಬೊಬ್ಬರು ₹20ರಿಂದ ₹50ರವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಪ್ರಶ್ನಿಸಿದರೆ ಧಮಕಿ ಹಾಕುತ್ತಾರೆ. ಕೇಳಿದಷ್ಟು ಹಣ ಕೊಡದಿದ್ದರೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಆಗಾಗ ಭಕ್ತರ ಮೇಲೆ ಹಲ್ಲೆ ಪ್ರಕರಣಗಳೂ ನಡೆಯುತ್ತಿವೆ. ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ವಹಿಸುತ್ತಿಲ್ಲ’ ಎಂದು ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಚಂದಗಾಲು ಶಂಕರ್ ದೂರಿದರು.

ಈ ಬಗ್ಗೆ ತಾಲ್ಲೂಕು ಆಡಳಿತ ಗಮನ ಹರಿಸಿ ಭಕ್ತರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು’ ಎಂದು ಅರಕೆರೆ ಎ.ಎಂ. ಜಗದೀಶ್ ಮನವಿ ಮಾಡಿದರು.

ಪ್ರಭಾರ ತಹಶೀಲ್ದಾರ್ ರವಿಶಂಕರ್ ಅವರಿಗೆ ದೂರು ಸಲ್ಲಿಸಿದರು. ಕರವೇ ಪದಾಧಿಕಾರಿಗಳಾದ ಲೋಕೇಶ್, ರಾಜಶೇಖರ್, ಎಂ. ಕುಮಾರ್ ಇದ್ದರು.

‘ಅಹಲ್ಯಾದೇವಿ ಮಾರಮ್ಮನ ದೇವಾಲಯದಲ್ಲಿ ಭಕ್ತರಿಂದ ಅನಗತ್ಯವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬಂದಿವೆ. ಆದಷ್ಟು ಶೀಘ್ರ ಧಾರ್ಮಿಕ ಆಚರಣೆ ನಡೆಸುವವರು ಮತ್ತು ವ್ಯಾಪಾರಿಗಳ ಸಭೆ ನಡೆಸಲಾಗುವುದು. ಭಕ್ತರಿಗೆ ತೊಂದರೆ ನೀಡದಂತೆ ಸೂಚನೆ ನೀಡಲಾಗುವುದು’ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್. ಮಹೇಶ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-1415104591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.