ಮದ್ದೂರು: ರಾಜ್ಯದ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕೊಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಜಿ. ಪ್ರಭುಲಿಂಗು ಆಗ್ರಹಿಸಿದರು.

ನಗರದ ಕಸ್ತೂರಿ ಕರ್ನಾಟಕ ಜನಪರ ಕಚೇರಿಯ ಆವರಣದಲ್ಲಿ ಬುಧವಾರನಡೆದ ರೈತ ಸಂಘ ಮತ್ತು ಕಸ್ತೂರಿ ಕರ್ನಾಟಕ ಜನಪರ ವೇದಿಕೆಗಳ ಸಂಘಟನೆಗಳ ಸಂಘಟಕರ ಸಭೆಯಲ್ಲಿ ಅವರು ಮಾತನಾಡಿದರು.

‘2022-23ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಘೋಷಿಸಿದ್ದ ₹150 ಬಾಕಿ ಹಣ, 2024-25 ಸಾಲಿನಲ್ಲಿ ಸರ್ಕಾರ ಘೋಷಿಸಿರುವ ₹100 ಪ್ರೋತ್ಸಾಹ ಧನ ಬಿಡುಗಡೆಗೊಳಿಸಿಲ್. ಹೀಗಿದ್ದರೂ 2026- 27ನೇ ಸಾಲಿನಲ್ಲಿ ಕಬ್ಬು ಅರೆಯುವಿಕೆಗೆ ಕಾರ್ಖಾನೆಗಳು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು ಬಾಕಿ ಹಣ ಪಾವತಿಸದೆ ಯಾವುದೇ ಕಾರಣಕ್ಕೂ ಕಾರ್ಖಾನೆ ಪ್ರಾರಂಭ ಮಾಡುವುದಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಎಚ್ಚರಿಸಿದರು.

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ. ಉಮಾಶಂಕರ ಮಾತನಾಡಿ, ‘ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಗಳ ಮಾಸಾಶನದ ಹಣವನ್ನು ಮೂರು ತಿಂಗಳಿಗಳಿಂದ ಬಿಡುಗಡೆಗೊಳಿಸಿಲ್ಲ. ಇದರಿಂದ ವೃದ್ಯಾಪ್ಯ ವೇತನ,ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ಇನ್ನಿತರ ಫಲಾನುಭವಿಗಳು ಆರ್ಥಿಕ ಸಂಕಷ್ಟ ಎದುರಿಸುವ ಜೊತೆಗೆ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರ ಗಂಭೀರವಾಗಿ ವಿಷಯ ಪರಿಗಣಿಸಿ ಪಿಂಚಣಿ ಹಣ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

‘ತಾಲ್ಲೂಕು ಕಚೇರಿಯ ಭೂಮಾಪನ ಇಲಾಖೆಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಸರ್ವೆ ಕೆಲಸಗಳು ಮತ್ತು ಜಮೀನು ಆಸ್ತಿ ವಗೈರೆಗಳಿಗೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಸಮರ್ಪಕವಾಗಿ ಆಗುತ್ತಿಲ್ಲ. ಈ ವ್ಯವಸ್ಥೆ ತಕ್ಷಣ ಸರಿಪಡಿಸಬೇಕು ಎಂದ ಅವರು ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್ ಗಳು ರೈತ ಪಡೆದ ಸಾಲಕ್ಕೆ ಸುಸ್ತಿ ಬಡ್ಡಿ ವಿಧಿಸಿ ನ್ಯಾಯಾಲಯಗಳಿಗೆ ಮೊಕದ್ದಮೆ ಹೂಡಲು ಮುಂದಾಗಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ. ಆದ್ದರಿಂದ ಜಿಲ್ಲಾಡಳಿತ ಬ್ಯಾಂಕ್ ವ್ಯವಸ್ಥಾಪಕರ ಸಭೆ ಕರೆದು ಅನ್ಯಾಯ ಸರಿಪಡಿಸಬೇಕು’ ಎಂದು ಮನವಿ ಮಾಡಿದರು.

ಸಭೆಯಲ್ಲಿ ಮುಖಂಡರಾದ ಸೊ.ಸಿ. ಪ್ರಕಾಶ್, ಕುದುರಗುಂಡಿ ನಾಗರಾಜು, ರಾಮಲಿಂಗೇಗೌಡ, ಮಲ್ಲೇಶ್, ಶಿವಣ್ಣ, ರೇಷ್ಮೆ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ, ಕೋಣಸಾಲೆ ಕೃಷ್ಣ, ಸಿದ್ದರಾಮ, ಶಿವಣ್ಣ, ವಿ.ಪಿ. ವರದರಾಜು, ರಾಮಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-40-937036611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.