ಬುಧವಾರ, ಅಕ್ಟೋಬರ್ 23, 2019
21 °C

ಮಂಡ್ಯ ವಿವಿಯಲ್ಲಿ ಅತ್ಯಧಿಕ ಶುಲ್ಕ: ದೂರು

Published:
Updated:
Prajavani

ಮಂಡ್ಯ: ನೂತನ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ರಾಜ್ಯದ ಇತರ ವಿವಿಗಳಿಗಿಂತಲೂ ಅತ್ಯಧಿಕ ಪ್ರವೇಶಾತಿ ಶುಲ್ಕ ನಿಗದಿ ಮಾಡಲಾಗಿದೆ ಎಂದು ಆರೋಪಿಸಿದ ನೊಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಸಚಿವ ಡಾ.ಅಶ್ವತ್ಥ ನಾರಾಯಣ ಅವರಿಗೆ ದೂರು ಸಲ್ಲಿಸಿದ್ದಾರೆ.

ಪ್ರಥಮ ವರ್ಷದ ಸ್ನಾತಕೋತ್ತರ ಪದವಿಗೆ ಸರ್ಕಾರಿ ಮಹಾವಿದ್ಯಾಲಯದಲ್ಲಿದ್ದ ಶುಲ್ಕಕ್ಕೆ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. ಸರ್ಕಾರಿ ಮಹಾವಿದ್ಯಾಲಯದಲ್ಲಿ  ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ₹ 5,870 ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಈಗ ಮಂಡ್ಯ ವಿವಿಯಲ್ಲಿ ₹ 7,085 ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮೊದಲು ₹ 6,910 ಶುಲ್ಕವಿತ್ತು. ಆದರೆ ಈಗ ಅದು ₹ 15,885ಕ್ಕೆ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ದುಪ್ಪಟ್ಟ ಹಣ ಪಾವತಿಸಲು ಕಷ್ಟವಾಗುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಥಮ ವರ್ಷದ ಪ್ರವೇಶಾತಿಗೆ ಒಂದು ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ದ್ವಿತೀಯ ಪಟ್ಟಿಗಾಗಿ ಕಾಯುತ್ತಿದ್ದರೂ ಈವರೆಗೆ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ವಿಶೇಷಾಧಿಕಾರಿಗಳನ್ನು ಸಂಪರ್ಕಿಸದಾಗ ಅವರು ಸರಿಯಾಗಿ ಉತ್ತರ ನೀಡುತ್ತಿಲ್ಲ. ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಮಾಡಿಲ್ಲ ಎಂದು ತಿಳಿದು ಬಂದಿದೆ. ಕಡಿಮೆ ಅಂಕ ಬಂದಿರುವ ವಿದ್ಯಾರ್ಥಿಗಳನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಉನ್ನತ ಶಿಕ್ಷಣ ಸಚಿವರು ಮಧ್ಯಪ್ರವೇಶಿಸಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)