ಮಂಡ್ಯ: ಇಲ್ಲಿನ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಏ.30ರಂದು ‘ನವವಸಂತ-2026’ ಮತ್ತು ‘ಯುವ ಸಂಭ್ರಮ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾಗಿ 7 ವರ್ಷ ಕಳೆದಿವೆ. ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ‘ವಿಶ್ವ ಗಂಗೋತ್ರಿ’ ಎಂದು ನಾಮಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ವಿವಿಯನ್ನು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದರು.

‘ಬೆಳಿಗ್ಗೆ 10.30ರಿಂದ ಸಂಜೆ 4.30ರವರೆವಿಗೂ ಕಾರ್ಯಕ್ರಮಗಳು ನಡೆಯಲಿವೆ. ನಟ, ಗಾಯಕ ಚಂದನ್ಶೆಟ್ಟಿ ಮತ್ತು ತಂಡದವರು ಹಾಗೂ ನಟ ಕಿಶನ್ ಬೆಳಗಲಿ ತಂಡದವರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸುವರು. ಇವರೊಂದಿಗೆ ಇಬ್ಬರು ಚಿತ್ರನಟಿಯನ್ನು ಕರೆತರುವ ಪ್ರಯತ್ನ ನಡೆದಿದೆ. ವಿದ್ಯಾರ್ಥಿಗಳು ಮತ್ತು ಚಲನಚಿತ್ರ ಕಲಾವಿದರಿಂದ ವೇದಿಕೆಯಲ್ಲಿ ಒಟ್ಟಿಗೆ ಕಾರ್ಯಕ್ರಮ ಕೊಡಿಸುವ ವಿಶೇಷ ಪ್ರಯತ್ನವೂ ನಡೆದಿದೆ’ ಎಂದು ವಿವರಿಸಿದರು.

‘ಮಂಡ್ಯ ವಿಶ್ವವಿದ್ಯಾಲಯ ಮುಚ್ಚೇ ಹೋಯಿತು ಎನ್ನುವ ಸ್ಥಿತಿಯಲ್ಲಿತ್ತು. ಆ ಸಂದರ್ಭದಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಿ ವಿವಿಯನ್ನು ಉಳಿಸಲಾಗಿದೆ. ಜತೆಗೆ, ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ. ಈಗಾಗಲೇ ನಿರ್ಮಾಣಗೊಂಡಿರುವ ವಿವಿ ಕ್ಯಾಂಪಸ್ನ ಮುಖ್ಯದ್ವಾರ, ರಸ್ತೆ, ಮೌಲ್ಯಮಾಪನ ಕಟ್ಟಡವನ್ನು ಇದೇ ವೇಳೆ ಉದ್ಘಾಟಿಸಲಾಗುವುದು. ಜತೆಗೆ, ನಾನಾ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಆ ಮೂಲಕ ಮಂಡ್ಯ ವಿವಿಗೆ ಹೊಸ ರೂಪ ನೀಡಲಾಗಿದೆ’ ಎಂದು ತಿಳಿಸಿದರು.

‘ಕುಲಸಚಿವ (ಆಡಳಿತ) ಎಂ.ಪಿ.ಕೃಷ್ಣಕುಮಾರ್ ಮಾತನಾಡಿ, ‘ಮಂಡ್ಯ ವಿವಿ ಕ್ಯಾಂಪಸ್ನಲ್ಲಿ ಅಕ್ರಮ ಚಟುವಟಿಕೆಗಳ ತಡೆಗಾಗಿ ಕ್ಯಾಂಪಸ್ನ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರಾತ್ರಿ ಕಾವಲುಗಾರರನ್ನು ನೇಮಿಸಲಾಗಿದೆ. ಇತ್ತೀಚೆಗಷ್ಟೇ ಕಾಂಪೌಂಡ್ ಕಾಮಗಾರಿ ಆರಂಭಿಸಲಾಗುತ್ತಿದೆ. ಅಕ್ರಮ, ಅನೈತಿಕ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಳ ಬೀಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೋಷ್ಠಿಯಲ್ಲಿ ಕುಲಸಚಿವ (ಮೌಲ್ಯಮಾಪನ) ವೆಂಕಟರಮಣ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷಾ, ಕನ್ನಡ ಪ್ರಸಾರಾಂಗ ನಿರ್ದೇಶಕ ಪ್ರೊ.ಚಂದ್ರಕಿರಣ್, ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಪ್ರತಿನಿಧಿ ಧ್ರುವ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-1713647555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.