ಮಂಡ್ಯ: ‘ಭಾರತ ಚುನಾವಣಾ ಆಯೋಗದಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 20ರಿಂದ ಅಕ್ಟೋಬರ್ 7ರವರೆಗೆ ನಡೆಯುವ ಪ್ರಕ್ರಿಯೆ ಬಗ್ಗೆ ರಾಜಕೀಯ ಪಕ್ಷಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದರು.

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯು ಮತದಾರರು, ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಸಿಬ್ಬಂದಿ ಒಳಗೊಂಡಂತಹ ಪಾರದರ್ಶಕ ಹಾಗೂ ಪಾಲ್ಗೊಳ್ಳುವಿಕೆಯ ಪ್ರಕ್ರಿಯೆಯಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಮತ್ತು ಅನರ್ಹರನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈಬಿಡುವುದಾಗಿದೆ ಎಂದರು.

ಜೂನ್ 20ರಿಂದ ಜೂನ್ 29ರವರೆಗೆ ಪೂರ್ವ ಸಿದ್ಧತೆ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಲ್ಲಿದೆ. ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಅಧಿಕಾರಿಗಳಿಂದ ಮನೆ-ಮನೆ ಸಮಿಕ್ಷೆ ಗಣತಿ ನಮೂನೆಗಳನ್ನು ಮತದಾರರಿಗೆ ಹಂಚುವುದು ಮತ್ತು ಸಂಗ್ರಹಸುವ ಕಾರ್ಯ ನಡೆಯಲಿದೆ.

ಅಂತರ್ಜಾಲದ ಮೂಲಕ ಮತದಾರರು ಗಣತಿ ನಮೂನೆಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಜುಲೈ 29ರಂದು ಮತಗಟ್ಟೆ ಪುನರ್ ವಿಂಗಡಣೆ ಸಂಬಂಧ ನಿಯಮಾನುಸಾರ ಪ್ರಸ್ತಾವವನ್ನು ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಪ್ರತೀಕ್ ಹೆಗ್ಡೆ, ಚುನಾವಣಾ ತಹಶೀಲ್ದಾರ್ ಸಿ.ಜೆ. ರವಿಶಂಕರ್ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ರಾಜಕೀಯ ಪಕ್ಷದ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-40-1245775130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.