ಮಂಡ್ಯ: ‘ಅಮೆರಿಕ ಅಕ್ಕ ಸಂಸ್ಥೆಯ 25ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಮತ್ತು ವನ್ಯಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅ.19ರಂದು ವಾಕಥಾನ್ ನಡೆಸಲಾಗುತ್ತಿದೆ’ ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ) ಸಂಸ್ಥೆಯವರು ಮಂಡ್ಯದಲ್ಲಿ ಆಯೋಜಿಸಲಾಗುವ ‘ಅಕ್ಕ ನಡಿಗೆ’ ಕಾರ್ಯಕ್ರಮದ ಕುರಿತು ರೂಪುರೇಷೆಗಳನ್ನು ಚರ್ಚಿಸಲು ಸೋಮವಾರ ಜಿಲ್ಲಾಧಿಕಾರಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅ.19ರಂದು ಬೆಳಿಗ್ಗೆ 7 ಗಂಟೆಗೆ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ವಾಕಥಾನ್ಗೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ವಾಕಥಾನ್ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸುವಂತೆ ಹಾಗೂ ನೋಂದಣಿಗಾಗಿ ಮೂರು ಕೌಂಟರ್ಗಳನ್ನು ಸ್ಥಾಪಿಸಿ ಸ್ವಯಂಸೇವಕರನ್ನು ನಿಯೋಜಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಅಮೆರಿಕ ಕನ್ನಡ ಕೂಟಗಳ ಅಧ್ಯಕ್ಷ ಮಧು ರಂಗಯ್ಯ ಅವರು ಅ.19ರಂದು ನಡೆಯುವ ವಾಕಥಾನ್ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು ಹಾಗೂ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಅತಿಥಿಗಳಾಗಿ ನಟರಾದ ನೆನಪಿರಲಿ ಪ್ರೇಮ್, ನಟಿ ಅಮೃತಾ ಪ್ರೇಮ್, ನಟಿ ಸಾನ್ಯ ಅಯ್ಯರ್ ಭಾಗವಹಿಸುವರು ಎಂದು ಸಭೆಯಲ್ಲಿ ಮಾಹಿತಿ ನೀಡಿದರು. ವಾಕಥಾನ್ ಭಾಗವಹಿಸುವವರ ನೋಂದಣಿ ಅಂದು ಅ.19ರಂದು ಬೆಳಿಗ್ಗೆ 6ಕ್ಕೆ ಆರಂಭವಾಗಲಿದೆ. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಅಕ್ಕ ಸಂಸ್ಥೆಯ ಬಸವರಾಜು, ಚಂದ್ರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.