ಮಂಡ್ಯ: ‘ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಮನೆಗಳಲ್ಲಿ ಹಸಿ ಕಸ, ಒಣ ಕಸ ವಿಂಗಡಣೆ ಮಾಡಬೇಕು ಹಾಗೂ ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಮಂಡ್ಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ನಾಗರಾಭಿವೃದ್ಧಿ ಕೋಶ ಮತ್ತು ಮಂಡ್ಯ ನಗರಸಭೆ ವತಿಯಿಂದ ಘನ ತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು 2026 ಕುರಿತು ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸುಪ್ರೀಂ ಕೋರ್ಟ್ನ 2026ರ ಹೊಸ ನಿಯಮಗಳ ಅನ್ವಯ ಹಸಿ ಕಸ, ಒಣ ಕಸ, ವಿಶೇಷ ತ್ಯಾಜ್ಯ (ಹಳೆಯ ಬ್ಯಾಟರಿ, ಬಲ್ಬ್, ಅವಧಿ ಮೀರಿದ ಔಷಧ, ಪೇಂಟ್) ಹಾಗೂ ಸ್ಯಾನಿಟರಿ ತ್ಯಾಜ್ಯವಾಗಿ (ಬಳಸಿದ ಡೈಪರ್, ಸ್ಯಾನಿಟರಿ ನ್ಯಾಪ್ಕಿನ್, ಮುಟ್ಟಿನ ತ್ಯಾಜ್ಯ) ನಾಲ್ಕು ರೀತಿಯಲ್ಲಿ ವಿಲೇವಾರಿ ಭಾಗಗಳಾಗಿ ರೂಪಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಸ್ಥಳೀಯ ಸಂಸ್ಥೆಗಳು ಪ್ರತ್ಯೇಕವಾಗಿ ಸಂಗ್ರಹಿಸಿದ ಒಣ ತ್ಯಾಜ್ಯವನ್ನು ಎಂ.ಆರ್.ಎಫ್ ಘಟಕಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳು, ಮರುಬಳಕೆ ಮಾಡಲಾಗದ ವಸ್ತುಗಳು, ದಹನಕಾರಿ ತ್ಯಾಜ್ಯ ನಿಷ್ಕ್ರಿಯ ತ್ಯಾಜ್ಯಗಳು ಎಂದು ಮರು ವಿಂಗಡಣೆ ಮಾಡಿ, ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿದರು. ಜಿಲ್ಲಾ ಹೆಚ್ಚುವರಿ ಎಸ್ಪಿ ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ನಗರಸಭೆಯ ಪೌರಾಯುಕ್ತ ಪಂಪಾಶ್ರೀ, ನಗರಸಭೆಯ ಕಾರ್ಯಪಾಲಕ ಎಂಜಿನಿಯರ್ ಪ್ರತಾಪ್, ಸುಂದರ್ ರಾಜ್, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-1098175866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.