ಮದ್ದೂರು: ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕೊಪ್ಪ ಹೋಬಳಿಯ ಕೀಳಘಟ್ಟ, ಆಬಲವಾಡಿ ಹಾಗೂ ಕೋಣಸಾಲೆ ಗ್ರಾಮಗಳಲ್ಲಿ ಸುಮಾರು ₹4.3 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಬಗ್ಗೆ ಈಗಾಗಲೇ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾನು ಹಾಗೂ ಸಚಿವ ಪ್ರಿಯಾoಕ್ ಖರ್ಗೆ ಭಾಗವಹಿಸಿದ್ದೆವು, ಅದರಲ್ಲಿ ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರಿನ ಸಂಗ್ರಹವಿದೆ ಎಂದ ಅವರು, ಅಗತ್ಯವಿದ್ದ ಕಡೆಗಳಲ್ಲಿ ರೈತರ ಬೋರ್ವೆಲ್ಗಳಿಂದಲೂ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಲು ಸೂಚನೆ ನೀಡಲಾಗಿದ್ದು, ಇದಕ್ಕಾಗಿಯೇ ಸೂಕ್ತ ಹಣ ಮೀಸಲಾಗಿರಿಸಿದೆ ಎಂದರು.

ನನ್ನ ಕ್ಷೇತ್ರವಾದ ನಾಗಮಂಗಲದ ವ್ಯಾಪ್ತಿಯಲ್ಲೂ 4 ರಿಂದ 5 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವವಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೊಪ್ಪ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದರು.

ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥ ಗುತ್ತಿಗೆದಾರರನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಲ್ಲದೆ, ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದರು.

ನಾಗಮಂಗಲ ಗ್ರಾಮಾoತರ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ದಿವಾಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ, ಮುಖಂಡರಾದ ವಿಜಯ್ ಗೌಡ, ಕುಮಾರ್ ಕೊಪ್ಪ, ಪರ್ವೀಜ್ ಅಹಮದ್, ಕೀಳಘಟ್ಟ ನಂಜುಂಡಯ್ಯ, ಬೆಕ್ಕಳಲೆ ರಘು, ಗುತ್ತಿಗೆದಾರರಾದ ಮಹೇಶ್, ಶಿವಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-40-219991256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.