ಶ್ರೀರಂಗಪಟ್ಟಣ: ‘ಮಹಿಳೆಯರು ಆತ್ಮಸ್ಥೈರ್ಯ ಬೆಳೆಸಿಕೊಂಡರೆ ನಿರೀಕ್ಷಿತ ಯಶಸ್ಸು ಗಳಿಸಲು ಸಾಧ್ಯ’ ಎಂದು ಮಂಡ್ಯದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ. ಶಾಂತಶ್ರೀ ಹೇಳಿದರು.

ಪಟ್ಟಣದಲ್ಲಿ ರಂಗನಾಯಕಿ ಸ್ತ್ರೀ ಸಮಾಜ ಈಚೆಗೆ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಈಚಿನ ದಶಕಗಳಲ್ಲಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಮಾಡುತ್ತಿದ್ದಾರೆ. ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಬಾಹ್ಯಾಕಾಶ, ಉದ್ದಿಮೆ, ರಾಜಕಾರಣ, ಕ್ರೀಡೆ ಇತರ ಕ್ಷೇತ್ರಗಳಲ್ಲಿ ಸಾಕಷ್ಟು ಮಂದಿ ಛಾಪು ಮೂಡಿಸಿದ್ದಾರೆ. ಅಂತಹ ಸಾಧಕಿಯರನ್ನು ಅನುಸರಿಸಬೇಕು’ ಎಂದು ತಿಳಿಸಿದರು.

ಸುಮತಿ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ‘ಮಹಿಳೆಯರು ಪುರುಷರಷ್ಟೇ ಸಮರ್ಥರು. ಸಿಗುವ ಅವಕಾಶಗಳನ್ನು ಬಳಸಿಕೊಂಡರೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯ. ಈ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ ಪದ್ಮನಾಭ, ಮಾಜಿ ಅಧ್ಯಕ್ಷರಾದ ದಮಯಂತಿ ಬೋರೇಗೌಡ ಮತ್ತು ಆಶಾಲತಾ ಪುಟ್ಟೇಗೌಡ ಅವರು ರಾಜ್ಯ ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದಿದ್ದಾರೆ. ನೆಹರೂ ಯುವ ಕೇಂದ್ರವು ಅತ್ಯುತ್ತಮ ಸಮಾಜ ಸೇವಾ ಸಂಸ್ಥೆ ಪ್ರಶಸ್ತಿ ನೀಡಿರುವುದು ರಂಗನಾಯಕಿ ಸಮಾಜದ ಹಿರಿಮೆಗೆ ಸಾಕ್ಷಿಯಾಗಿದೆ’ ಎಂದರು.

ಇಂದ್ರಾಣಿ ಮಾತನಾಡಿ, ‘ಮಾಜಿ ಶಾಸಕಿ ದಮಯಂತಿ ಬೋರೇಗೌಡ ಇತರರ ತಂಡ 1966ರಲ್ಲಿ ರಂಗನಾಯಕಿ ಸ್ತ್ರೀ ಸಮಾಜವನ್ನು ಆರಂಭಿಸಿದ್ದು, ನಿರಂತರವಾಗಿ ನಡೆಯುತ್ತಿದೆ. ಮಹಿಳೆಯರಿಗೆ ಹೊಲಿಗೆ ತರಬೇತಿ, ಬ್ಯೂಟಿಷಿಯನ್, ಟೈಪಿಂಗ್, ಕುಚ್ಚು ಕಟ್ಟುವುದು, ಪೇಪರ್ ಕವರ್ ಸಿದ್ದಪಡಿಸುವ ತರಬೇತಿ, ಆರೋಗ್ಯ ತಪಾಸಣಾ ಶಿಬಿರ ಇತರ ಚಟುವಟಿಕೆಗಳ ಜರುಗುತ್ತಿವೆ’ ಎಂದು ಹೇಳಿದರು.

ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ ಪದ್ಮನಾಭ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ಉಪಾಧ್ಯಕ್ಷೆ ಕಮಲ, ಕಾರ್ಯದರ್ಶಿ ನಳಿನಾ, ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕಿ ಸುವರ್ಣಾದೇವಿ, ಕೌಶಲ್ಯಾ, ಗುಣಸಾಗರಿ ನಾಗರಾಜು, ಅನನ್ಯ ಹಾರ್ಟ್ ಸಂಸ್ಥೆ ಅಧ್ಯಕ್ಷೆ ಬಿ.ಎಸ್. ಅನುಪಮಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-40-1322246758

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.